ಮಮತಾ ಬ್ಯಾನರ್ಜಿ 
ದೇಶ

ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈದ್ಯರ ಆರೋಗ್ಯದಲ್ಲಿ ಏರು-ಪೇರು: ಮಧ್ಯ ಪ್ರವೇಶಿಸಲು ಸಿಎಂಗೆ ಐಎಂಎ ಪತ್ರ

ಬಂಗಾಳದ ಯುವ ವೈದ್ಯರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿ ಸುಮಾರು ಒಂದು ವಾರ ಕಳೆದಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು IMA ಬೆಂಬಲಿಸುತ್ತದೆ. ಈ ಸಂಬಂಧ ನೀವು ಕೂಡಲೇ ಗಮನ ಹರಿಸಬೇಕು ಎಂದು ಅವರು ಅಕ್ಟೋಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕೊಲ್ಕೋತಾ: ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರ ಆರೋಗ್ಯ ಸ್ಥಿತಿ ಹದಗೆಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ಕೂಡಲೇ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದೆ.

ಪಶ್ಚಿಮ ಬಂಗಾಳ ಸರ್ಕಾರವು ಅವರ ಎಲ್ಲಾ ಬೇಡಿಕೆಗಳನ್ನು ಪೂರೈಸಲು ಸಂಪೂರ್ಣವಾಗಿ ಸಮರ್ಥವಾಗಿದೆ ಎಂದು ಐಎಂಎ ಅಧ್ಯಕ್ಷ ಆರ್.ವಿ.ಅಶೋಕನ್ ಹೇಳಿದ್ದಾರೆ. ಬಂಗಾಳದ ಯುವ ವೈದ್ಯರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿ ಸುಮಾರು ಒಂದು ವಾರ ಕಳೆದಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು IMA ಬೆಂಬಲಿಸುತ್ತದೆ. ಈ ಸಂಬಂಧ ನೀವು ಕೂಡಲೇ ಗಮನ ಹರಿಸಬೇಕು ಎಂದು ಅವರು ಅಕ್ಟೋಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅವರಿಗೆ ಶಾಂತಿಯುತ ವಾತಾವರಣ ಮತ್ತು ಭದ್ರತೆ ಬೇಕಾಗಿದೇಯೆ ಹೊರತು ಐಷಾರಾಮಿ ಅಲ್ಲ. ಯುವ ಪೀಳಿಗೆಯ ವೈದ್ಯರೊಂದಿಗೆ ಹಿರಿಯರು ಮತ್ತು ಸರ್ಕಾರದ ಮುಖ್ಯಸ್ಥರಾಗಿ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಾವು ನಿಮ್ಮಲ್ಲಿ ಮನವಿ ಮಾಡುತ್ತೇವೆ. ಇಡೀ ಭಾರತದ ವೈದ್ಯಕೀಯ ಭ್ರಾತೃತ್ವವು ಕಾಳಜಿ ವಹಿಸಿದ್ದು, ನಿಮ್ಮ ಮೇಲೆ ನಂಬಿಕೆ ಇರಿಸಿದೆ. ನೀವು ನಮ್ಮಿಂದ ಯಾವುದೇ ರೀತಿಯ ಸಹಾಯ ಬಯಸಿದರೆ ಅದನ್ನು ಒದಗಿಸಲು ಭಾರತೀಯ ವೈದ್ಯಕೀಯ ಸಂಘದ ಕಚೇರಿಗಳು ಸಂತೋಷದಿಂದ ಸಹಾಯ ಮಾಡುತ್ತೇವೆ ಎಂದು ಅವರು ಹೇಳಿದರು. ಶನಿವಾರ ಸಂಜೆಯಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರನ್ನು ಭೇಟಿ ಮಾಡಲು ಕೋಲ್ಕತ್ತಾಗೆ ತೆರಳುತ್ತಿದ್ದೇನೆ ಎಂದು ಅಶೋಕನ್ ಪಿಟಿಐಗೆ ತಿಳಿಸಿದರು.

ನಾನು ಕೋಲ್ಕತ್ತಾಗೆ ಹೋಗುತ್ತಿದ್ದೇನೆ ಮತ್ತು ಉಪವಾಸ ನಿರತ ಕಿರಿಯ ವೈದ್ಯರನ್ನು ಭೇಟಿ ಮಾಡುತ್ತೇನೆ, ನಾನು ಆಸ್ಪತ್ರೆಗೆ ದಾಖಲಾಗಿರುವ ಯುವ ವೈದ್ಯರನ್ನು ನೋಡಲು ಆರ್ ಜಿ ಕರ್ ಆಸ್ಪತ್ರೆಗೆ ಹೋಗುತ್ತೇನೆ. ನಾನು ಇತರ ಯುವ ವೈದ್ಯರೊಂದಿಗೆ ಮಾತನಾಡುತ್ತೇನೆ ಮತ್ತು ನಂತರ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ. ನನ್ನ ಪತ್ರಕ್ಕೆ ಉತ್ತರ ಬರಲಿದೆ, ಅದಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಗುರುವಾರ ರಾತ್ರಿ ವೈದ್ಯ ಅನಿಕೇತ್ ಮಹತೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರ ಚಿಕಿತ್ಸೆಯ ಮೇಲ್ವಿಚಾರಣೆಗಾಗಿ ಐದು ಸದಸ್ಯರ ವೈದ್ಯಕೀಯ ಮಂಡಳಿಯನ್ನು ರಚಿಸಲಾಯಿತು.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತ ಮಹಿಳಾ ವೈದ್ಯಾಧಿಕಾರಿಗೆ ನ್ಯಾಯ ಒದಗಿಸಬೇಕು ಮತ್ತು ಆರೋಗ್ಯ ಕಾರ್ಯದರ್ಶಿ ಎನ್‌ಎಸ್‌ನಿಗಂ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ