ರಾಹುಲ್ ಗಾಂಧಿ 
ದೇಶ

ಮೈಸೂರು-ದರ್ಭಾಂಗ ರೈಲು ಅಪಘಾತ: ಕೇಂದ್ರ ಸರ್ಕಾರ ಪಾಠ ಕಲಿತಂತಿಲ್ಲ- ರಾಹುಲ್ ವಾಗ್ದಾಳಿ!

ಈ ಅವಘಡ ಒಡಿಶಾದ ರೈಲು ದುರಂತವನ್ನು ನೆನಪಿಸುವಂತಿದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯುವಲ್ಲಿ ಸರ್ಕಾರ ವಿಫಲವಾಗಿದೆ

ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್ ಮತಿ ಎಕ್ಸ್‌ಪ್ರೆಸ್ ರೈಲು- ಗೂಡ್ಸ್ ರೈಲು ನಡುವೆ ನಿನ್ನೆ ಸಂಜೆ ಸಂಭವಿಸಿದ ಅಪಘಾತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಈ ಅವಘಡ ಒಡಿಶಾದ ರೈಲು ದುರಂತವನ್ನು ನೆನಪಿಸುವಂತಿದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಹಲವು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉನ್ನತ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.

ರೈಲು ಸೇವೆ ಪುನರಾರಂಭಿಸುವ ಪ್ರಯತ್ನ ಮುಂದುವರೆದಿದೆ. ಪರಿಹಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಖಚಿತಪಡಿಸಿದ್ದಾರೆ.

ರೈಲು ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ರೈಲುಗಳ ನಡುವಿನ ಡಿಕ್ಕಿ ಬಗ್ಗೆ ಮಾಹಿತಿ ಬಂದ ತಕ್ಷಣ ಇಪ್ಪತ್ತೆರಡು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿ, ಪ್ರಯಾಣಿಕರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ತಾವು ತಲುಪಬೇಕಾದ ಸ್ಥಳ ತಲುಪಲು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಆದರೆ ಪದೇ ಪದೇ ಸಂಭವಿಸುವ ರೈಲು ಅಪಘಾತಗಳನ್ನು ತಡೆಗಟ್ಟಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT