ಕಳೆದ ವರ್ಷ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದ ಸಿದ್ದಿಕಿ 
ದೇಶ

ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗಳಿಗೆ ಕಾನೂನಿನ ಭಯವಿಲ್ಲ: ಕಾಂಗ್ರೆಸ್

ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರನ್ನು ಆದಷ್ಟು ಬೇಗ ಕಾನೂನು ಕ್ರಮಕ್ಕೆ ಒಳಪಡಿಸಬೇಕು

ನವದೆಹಲಿ: ಮುಂಬೈಯಲ್ಲಿ NCP ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯು ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಪ್ರತಿಪಕ್ಷಗಳು ಪ್ರಶ್ನಿಸುವಂತೆ ಮಾಡಿದೆ. ಸಿದ್ದಿಕ್ಕಿ ಹತ್ಯೆ ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತಿದ್ದು, ಘಟನೆ ಕುರಿತು ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಯಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದಿಕಿ ಅವರ ದುರಂತದ ಸಾವು ಪದಗಳಿಗೆ ಮೀರಿದ ಆಘಾತಕಾರಿಯಾಗಿದೆ. ಅವರ ಸಾವಿಗೆ ನ್ಯಾಯ ಸಿಗಬೇಕು. ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರನ್ನು ಆದಷ್ಟು ಬೇಗ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಸಿದ್ದಿಕಿ ಹತ್ಯೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.

ಸಿದ್ದಿಕಿ ಅವರು ಜೀವ ಬೆದರಿಕೆಯ ಬಗ್ಗೆ ಹಲವು ಸಂದರ್ಭಗಳಲ್ಲಿ ಅಧಿಕಾರಿಗಳು ತಿಳಿಸಿದ್ದರು ಮತ್ತು ಅವರು ವೈ-ಪ್ಲಸ್ ಭದ್ರತೆಯಲ್ಲಿದ್ದರೂ ಸಹ ಪ್ರಾಣ ಕಳೆದುಕೊಂಡಿದ್ದಾರೆ. ರಸ್ತೆಯಲ್ಲಿ, ಗದ್ದಲದ ಮಾರುಕಟ್ಟೆ ಮಧ್ಯದಲ್ಲಿ ಗುಂಡಿನ ದಾಳಿ ನಡೆದಿರುವುದು ಕ್ರಿಮಿನಲ್ ಗಳು ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಕಾನೂನಿಗೆ ಹೆದರುವುದಿಲ್ಲ ಎಂಬುದನ್ನು ತೋರಿಸುತ್ತದೆ. ಆಡಳಿತಾರೂಢ ಮೈತ್ರಿ ಪಕ್ಷದ ನಾಯಕರು ಸಹ ರಾಜಧಾನಿಯ ಹೃದಯಭಾಗದಲ್ಲಿ ಸುರಕ್ಷಿತವಾಗಿಲ್ಲ. ಇಂತಹ ಪಕ್ಷದ ಹಿರಿಯ ನಾಯಕರೇ ಹತ್ಯೆಯಾದರೆ ಇನ್ನೂ ಸಾಮಾನ್ಯ ಜನರು ಹೇಗೆ ಸುರಕ್ಷಿತವಾಗಿ ಬಾಳಬೇಕು ಎಂಬ ಬಗ್ಗೆ ಆಡಳಿತರೂಢ ಪಕ್ಷ ಉತ್ತರಿಸುವಂತೆ ಅವರು ಹೇಳಿದ್ದಾರೆ.

ಬಾಬಾ ಸಿದ್ದಿಕಿ ಅವರ ಹತ್ಯೆಯ ಬಗ್ಗೆ ಕೇಳಿ ಪದಗಳಿಗೆ ಮೀರಿದ ಆಘಾತವಾಗಿದೆ ಎಂದು ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಎಕ್ಸ್ ನಲ್ಲಿ ಹೇಳಿದ್ದಾರೆ. 1999 ರಲ್ಲಿ ಸುನೀಲ್ ದತ್ ಅವರೊಂದಿಗೆ ಮೊದಲು ಅವರನ್ನು ಭೇಟಿಯಾಗಿದ್ದೆ. ಅವರ ಅಗಲಿಕೆ ವೈಯಕ್ತಿಕವಾಗಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT