ಅಪಘಾತಕ್ಕೀಡಾದ ಕಾರು 
ದೇಶ

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ

ನೆರೆಯ ಛತ್ತೀಸ್‌ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಬಾಲಾಘಾಟ್: ಮಧ್ಯಪ್ರದೇಶದ ಮಾವೋವಾದಿ ಪೀಡಿತ ಬಾಲಾಘಾಟ್ ಜಿಲ್ಲೆಯಲ್ಲಿ ಭಾನುವಾರ ಗಸ್ತು ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆಯ ಛತ್ತೀಸ್‌ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಗಾಯಾಳುಗಳು ನೆರೆಯ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಸಿಆರ್‌ಪಿಎಫ್‌ನ 7ನೇ ಡಿ ಕಂಪನಿ 4ಕ್ಕೆ ಸೇರಿದ ಸಂತ್ರಸ್ತರು ಗಸ್ತು ಕಾರ್ಯದಲ್ಲಿದ್ದಾಗ ಜಿಲ್ಲಾ ಕೇಂದ್ರದಿಂದ 100 ಕಿಮೀ ದೂರದಲ್ಲಿರುವ ಕುಡಾನ್ ಗ್ರಾಮದ ಬಳಿ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವುದಾಗಿ ಅವರು ಮಾಹಿತಿ ನೀಡಿದರು.

ಅಪಘಾತದ ನಂತರ ಬಾಡಿಗೆ ಖಾಸಗಿ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ