ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯನ್ನು ವಿರೋಧಿಸಿ ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹದ ಸ್ಥಳದಲ್ಲಿ ಜನರು ಸೇರಿರುವುದು  
ದೇಶ

ಆರ್ ಜಿ ಕಾರ್ ಆಸ್ಪತ್ರೆ ಪ್ರಕರಣ: ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ 10ನೇ ದಿನಕ್ಕೆ; ಮತ್ತೋರ್ವ ವೈದ್ಯ ಆಸ್ಪತ್ರೆಗೆ ದಾಖಲು

ರಾಜ್ಯದ ಉತ್ತರ ಭಾಗದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರಲ್ಲಿ ಮೂವರನ್ನು ಈ ಹಿಂದೆ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೋಲ್ಕತ್ತಾ: ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆ ಘಟನೆಯ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಇಂದು ಸೋಮವಾರ 10 ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಮತ್ತೊಬ್ಬ ವೈದ್ಯರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪುಲಸ್ತ ಆಚಾರ್ಯ ಅವರನ್ನು ಭಾನುವಾರ ರಾತ್ರಿ ತೀವ್ರ ಹೊಟ್ಟೆ ನೋವಿನ ಕಾರಣದಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಜ್ಯದ ಉತ್ತರ ಭಾಗದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರಲ್ಲಿ ಮೂವರನ್ನು ಈ ಹಿಂದೆ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಸ್ತುತ ಪುಲಸ್ತ ಅವರು ಸಿಸಿಯುನಲ್ಲಿದ್ದಾರೆ. ಅವರ ದೇಹದ ಪ್ಯಾರಾಮೀಟರ್ ಹದಗೆಟ್ಟಿವೆ. ಅವರಿಗೆ ಚಿಕಿತ್ಸೆ ನೀಡಲು ನಾವು ವೈದ್ಯಕೀಯ ಮಂಡಳಿಯನ್ನು ರಚಿಸಿದ್ದೇವೆ ಎಂದು ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಮಧ್ಯೆ, ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರು ವೈದ್ಯರ ಜಂಟಿ ವೇದಿಕೆಗೆ (JDP) ಪತ್ರ ಬರೆದಿದ್ದು, ಅಕ್ಟೋಬರ್ 15 ರಂದು ತಮ್ಮ ಉದ್ದೇಶಿತ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು, ಈ ಪ್ರತಿಭಟನೆಯು ರಾಜ್ಯ ಸರ್ಕಾರದ ವಾರ್ಷಿಕ ದುರ್ಗಾಪೂಜೆ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆಸದಂತೆ ತಿಳಿಸಿದ್ದಾರೆ.

ತಮ್ಮ ಬೇಡಿಕೆಗಳ ಕುರಿತು ಚರ್ಚಿಸಲು ಇಂದು ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಛೇರಿ ಸ್ವಾಸ್ಥ್ಯ ಭವನದಲ್ಲಿ ಸಭೆಗೆ ಆಹ್ವಾನಿಸಿದರು. ಆರೋಗ್ಯ ಮತ್ತು ಯೋಗಕ್ಷೇಮದ ಹಿತದೃಷ್ಟಿಯಿಂದ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಲು ಕಿರಿಯ ವೈದ್ಯರಿಗೆ ಸಲಹೆ ನೀಡುವಂತೆ ಮನೋಜ್ ಪಂತ್ ಅವರು ಇಮೇಲ್‌ನಲ್ಲಿ ಜೆಪಿಡಿಯನ್ನು ಒತ್ತಾಯಿಸಿದ್ದಾರೆ.

ಆರ್‌ಜಿ ಕಾರ್ ಆಸ್ಪತ್ರೆ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು, ಆರೋಗ್ಯ ಕಾರ್ಯದರ್ಶಿ ಎನ್‌ಎಸ್‌ ನಿಗಮ್‌ ಅವರನ್ನು ಕೂಡಲೇ ವಜಾಗೊಳಿಸಬೇಕು, ಕೆಲಸದ ಸ್ಥಳ ಭದ್ರತೆ ಮತ್ತು ಇತರ ಕ್ರಮಗಳನ್ನು ನೀಡಬೇಕೆಂದು ಕಿರಿಯ ವೈದ್ಯರು ಒತ್ತಾಯಿಸಿದ್ದಾರೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸುವುದು, ಹಾಸಿಗೆ ಖಾಲಿ ಇರುವ ಮಾನಿಟರಿಂಗ್ ಸಿಸ್ಟಮ್‌ನ ಅನುಷ್ಠಾನ ಮತ್ತು ಸಿಸಿಟಿವಿ, ಆನ್-ಕಾಲ್ ರೂಮ್‌ಗಳು ಮತ್ತು ವಾಶ್‌ರೂಮ್‌ಗಳಿಗೆ ಅಗತ್ಯ ನಿಬಂಧನೆಗಳು, ಕಾರ್ಯಪಡೆಗಳ ರಚನೆ ಸೇರಿದಂತೆ ಕಿರಿಯ ವೈದ್ಯರು ಇತರ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT