ಸಾಂದರ್ಭಿಕ ಚಿತ್ರ  
ದೇಶ

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ: ಇಂದು ದಿನಾಂಕ ಪ್ರಕಟ

ಚುನಾವಣಾ ಸಮಿತಿಯು ಮಧ್ಯಾಹ್ನ 3.30ಕ್ಕೆ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡರೆ, ಜಾರ್ಖಂಡ್ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳುತ್ತದೆ.

ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಮಂಗಳವಾರ ಪ್ರಕಟಿಸಲಿದೆ.

ಚುನಾವಣಾ ಸಮಿತಿಯು ಮಧ್ಯಾಹ್ನ 3.30ಕ್ಕೆ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡರೆ, ಜಾರ್ಖಂಡ್ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳುತ್ತದೆ.

ಎರಡು ಅಸೆಂಬ್ಲಿಗಳಿಗೆ ಸಾರ್ವತ್ರಿಕ ಚುನಾವಣೆಗಳಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ ಮೂರು ಲೋಕಸಭೆ ಮತ್ತು ಕನಿಷ್ಠ 47 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನೂ ಚುನಾವಣಾ ಆಯೋಗ ಘೋಷಿಸಬಹುದು.

ಕೇರಳದ ವಯನಾಡ್, ಮಹಾರಾಷ್ಟ್ರದ ನಾಂದೇಡ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಮೂರು ಲೋಕಸಭಾ ಸ್ಥಾನಗಳು ಖಾಲಿ ಇವೆ.

ವಯನಾಡ್ ಕ್ಷೇತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಟ್ಟು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ತೆರವಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ನಾಂದೇಡ್ ಪ್ರತಿನಿಧಿಸಿದ್ದ ಕಾಂಗ್ರೆಸ್ ಸಂಸದ ವಸಂತ್ ಚವಾಣ್ ಮತ್ತು ಬಸಿರ್ ಹತ್ ಪ್ರತಿನಿಧಿಸಿದ್ದ ಟಿಎಂಸಿ ಸಂಸದ ಹಾಜಿ ಶೇಖ್ ನೂರುಲ್ ಇಸ್ಲಾಂ ಇತ್ತೀಚೆಗೆ ನಿಧನರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT