ಮುಂಬೈನ ಕಟ್ಟಡವೊಂದರಲ್ಲಿ ಬೆಂಕಿ 
ದೇಶ

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, ಮೂವರ ಸಾವು

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ

ಮುಂಬೈ: ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯಿಂದ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿರುವುದಾಗಿ ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!