ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.3ರಷ್ಟು ಡಿಎ ಹೆಚ್ಚಳ

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಕೇಂದ್ರ ಸರ್ಕಾರಿ ನೌಕರರ ಡಿಎ ಏರಿಕೆ ಹಾಗೂ ಪಿಂಚಣಿದಾರರ ಡಿಆರ್‌ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಕೇಂದ್ರ ಸರ್ಕಾರಿ ನೌಕರರ ಡಿಎ ಏರಿಕೆ ಹಾಗೂ ಪಿಂಚಣಿದಾರರ ಡಿಆರ್‌ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಏರಿಕೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳ ಡಿಎಯನ್ನು ವರ್ಷಕ್ಕೆ ಎರಡು ಬಾರಿ ಪರಿಷ್ಕರಣೆ ಮಾಡುತ್ತದೆ. ಜನವರಿಯಲ್ಲಿ ಹಾಗೂ ಜುಲೈನಿಂದ ಪೂರ್ವಾನ್ವಯವಾಗುವಂತೆ ನಂತರದ ತಿಂಗಳುಗಳಲ್ಲಿ ಡಿಎ ಪರಿಷ್ಕರಣೆ ನಡೆಸುವುದು ರೂಢಿ. ಈ ಮೂಲಕ ಹಾಲಿ ಕೇಂದ್ರ ಸರ್ಕಾರಿ ನೌಕರರು ಡಿಎ ಪಡೆದರೆ ಪಿಂಚಣಿದಾರರು ಡಿಆರ್‌ (ಡಿಯರ್‌ನೆಸ್‌ ರಿಲೀಫ್‌) ಸ್ವೀಕರಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video