ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: ಅಗ್ರೋಟೆಕ್ ಸಂಸ್ಥೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಐವರು ಸಾವು

ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

ಭುಜ್: ಗುಜರಾತ್‌ನ ಕಚ್ ಜಿಲ್ಲೆಯ ಅಗ್ರೋಟೆಕ್ ಕಂಪನಿಯೊಂದರಲ್ಲಿ ಬುಧವಾರ ಬೆಳಗ್ಗೆ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಐವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

"ಕೊಳಚೆ ಸಂಸ್ಕರಣಾ ಘಟಕ ಸ್ವಚ್ಛಗೊಳಿಸಲು ಕಾರ್ಮಿಕರೊಬ್ಬರು ಟ್ಯಾಂಕ್‌ಗೆ ಇಳಿದಾಗ ಅವರು ಉಸಿರುಗಟ್ಟಿ ಪ್ರಜ್ಞೆ ತಪ್ಪಿದ್ದಾರೆ. ಈ ವೇಳೆ ಇನ್ನಿಬ್ಬರು ಕಾರ್ಮಿಕರು ಆತನನ್ನು ರಕ್ಷಿಸಲು ಟ್ಯಾಂಕ್ ಒಳಗೆ ಇಳಿದಿದ್ದಾರೆ. ಆದರೆ ಅವರು ಸಹ ಮೂರ್ಛೆ ಹೋಗಿದ್ದಾರೆ. ಅವರನ್ನು ಅನುಸರಿಸಿ ಇನ್ನೂ ಇಬ್ಬರು ಟ್ಯಾಂಕ್ ಗೆ ಇಳಿದಿದ್ದು, ಎಲ್ಲಾ ಐವರು ಮೃತಪಟ್ಟಿದ್ದಾರೆ ಎಂದು” ಬಾಗ್ಮಾರ್ ತಿಳಿಸಿದ್ದಾರೆ.

ಈ ಸಂಬಂಧ ಕಾಂಡ್ಲಾ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಖಾದ್ಯ ತೈಲ ಮತ್ತು ಜೈವಿಕ ಡೀಸೆಲ್ ಉತ್ಪಾದನೆಯಲ್ಲಿ ತೊಡಗಿರುವ 'ಇಮಾಮಿ ಅಗ್ರೋಟೆಕ್' ಸಂಸ್ಥೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಕಾಂಡ್ಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಕಾರ್ಮಿಕರನ್ನು ಸಿದ್ಧಾರ್ಥ್ ತಿವಾರಿ, ಅಜ್ಮತ್ ಖಾನ್, ಆಶಿಶ್ ಗುಪ್ತಾ, ಆಶಿಶ್ ಕುಮಾರ್ ಮತ್ತು ಸಂಜಯ್ ಠಾಕೂರ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

Gen Z ವಿಚಾರದಲ್ಲಿ BJP-RSS ನಡುವೆ ಬಿರುಕು: ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ