ಸಭೆಯಿಂದ ಹೊರನಡೆದ ವಿಪಕ್ಷ ಸಂಸದರು 
ದೇಶ

ವಕ್ಫ್ ತಿದ್ಧುಪಡಿ ಕಾಯ್ದೆ ಚರ್ಚೆ ಕುರಿತ ಜೆಪಿಸಿ ಸಭೆಯಿಂದ ಹೊರ ನಡೆದ ವಿಪಕ್ಷ ನಾಯಕರು

ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಸಂಸದೀಯ ನೀತಿ ಸಂಹಿತೆಯ ಸಂಪೂರ್ಣ ಉಲ್ಲಂಘನೆ ಮಾಡಿದ್ದರ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಿರೋಧ ಪಕ್ಷದ ಸಂಸದರು ಪತ್ರ ಬರೆದಿದ್ದಾರೆ.

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಚರ್ಚೆ ನಡೆಸಲು ಕರೆಯಲಾಗಿದ್ದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಿಂದ ವಿಪಕ್ಷ ನಾಯಕರು ಹೊರನಡೆದಿದ್ದಾರೆ. ಈ ಸಮಿತಿ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಸಭೆ ಬಹಿಷ್ಕರಿಸಿದ್ದಾರೆ.

ಬಿಜೆಪಿ ಸದಸ್ಯರು ತಮ್ಮ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ, ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಸಭೆಯಲ್ಲಿ ಸಂಸದೀಯ ನೀತಿ ಸಂಹಿತೆಯ ಸಂಪೂರ್ಣ ಉಲ್ಲಂಘನೆಯ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಿರೋಧ ಪಕ್ಷದ ಸಂಸದರು ಪತ್ರ ಬರೆದಿದ್ದಾರೆ. ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ, ಕಾಂಗ್ರೆಸ್‌ನಿಂದ ಗೌರವ್ ಗೊಗೊಯ್ ಮತ್ತು ಇಮ್ರಾನ್ ಮಸೂದ್, ಡಿಎಂಕೆಯ ಎ ರಾಜಾ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಿವಸೇನೆಯ (ಯುಬಿಟಿ) ಅರವಿಂದ್ ಸಾವಂತ್ ಮತ್ತು ಎಎಪಿಯ ಸಂಜಯ್ ಸಿಂಗ್ ಸಭೆಯನ್ನು ಬಹಿಷ್ಕರಿಸಿದ್ದಾರೆ.

ವಕ್ಫ್ ಮಸೂದೆ ಕುರಿತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಪ್ರತಿನಿಧಿಗಳಿಂದ ಸಮಿತಿಯು ಮಂಡನೆಯನ್ನು ಆಲಿಸುತ್ತಿರುವಾಗ ಗದ್ದಲ ಉಂಟಾಯಿತು. ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ಅಭಿಜಿತ್ ಗಂಗೂಲಿ ಅವರು ವಕ್ಫ್ ಬೋರ್ಡ್‌ಗಳಿಗೆ ಮಹಿಳೆಯರನ್ನು ಸೇರಿಸುವ ಪ್ರಸ್ತಾಪದ ಕುರಿತು ಬ್ಯಾನರ್ಜಿ ಮತ್ತು ಗೊಗೊಯ್ ಅವರೊಂದಿಗೆ ಗಲಾಟೆ ನಡೆಸಿದರು ಎಂದು ವರದಿಯಾಗಿದೆ. ಆದರೆ, ಸುಮಾರು ಒಂದು ಗಂಟೆಯ ನಂತರ ಪ್ರತಿಪಕ್ಷದ ಸದಸ್ಯರು ಮತ್ತೆ ಸಭೆ ಸೇರಿದರು. ಸ್ಥಾಪಿತ ಸಂಸದೀಯ ನಿಯಮಗಳಿಗೆ ಅನುಗುಣವಾಗಿ ಸಮಿತಿಯು ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೊರನಡೆದ ನಂತರ ಸಾವಂತ್ ಸುದ್ದಿಗಾರರಿಗೆ ತಿಳಿಸಿದರು. ಅಧಿವೇಶನದಲ್ಲಿ ವೈಯಕ್ತಿಕ ಆರೋಪಗಳಿಗೆ ಅವಕಾಶ ನೀಡಲಾಗಿದೆ ಎಂದು ಅವರು ಪ್ರತಿಪಾದಿಸಿದರು, ವಿಶೇಷವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರನ್ನು ಗುರಿಯಾಗಿಸಿಕೊಂಡು ಆರೋಪ ಮಾಡಲಾಗಿದೆ. ಸಮಿತಿಯು ತತ್ವಗಳು ಮತ್ತು ಮಾನದಂಡಗಳೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ ಹೀಗಾಗಿ ನಾವು ಬಹಿಷ್ಕರಿಸಿದ್ದೇ ಎಂದು ಅವರು ಹೇಳಿದರು. ಅಕ್ಟೋಬರ್ 14 ರಂದು ನಡೆದ ಸಭೆಯಲ್ಲಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಅವರು ಸಂಸತ್ತಿನ ನೀತಿ ಸಂಹಿತೆ ಮತ್ತು ಕಾರ್ಯವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸದಸ್ಯರು ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT