ಹಳಿತಪ್ಪಿದ ಅಗರ್ತಲಾ-ಎಲ್‌ಟಿಟಿ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು 
ದೇಶ

ಅಸ್ಸಾಂ: ಅಗರ್ತಲಾ-ಎಲ್‌ಟಿಟಿ ಎಕ್ಸ್‌ಪ್ರೆಸ್‌ ರೈಲಿನ 8 ಬೋಗಿಗಳು ಹಳಿತಪ್ಪಿ ಅವಘಡ

ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾದ ಬಗ್ಗೆ ಇನ್ನೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ದಿಬಾಲಾಂಗ್: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು ಗುರುವಾರ ಮಧ್ಯಾಹ್ನ ಹಳಿತಪ್ಪಿವೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾದ ಬಗ್ಗೆ ಇನ್ನೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇಂದು ಮಧ್ಯಾಹ್ನ 3.55ಕ್ಕೆ ರೈಲಿನ ಎಂಟು ಬೋಗಿಗಳು ಹಳಿ ತಪ್ಪಿದ್ದು, ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳಿತಪ್ಪಿದ ಬೋಗಿಗಳಲ್ಲಿ ಪವರ್ ಕಾರ್ ಮತ್ತು ರೈಲಿನ ಎಂಜಿನ್ ಸೇರಿದೆ.

ರಕ್ಷಣಾ ಕಾರ್ಯಾಚರಣೆ ಮತ್ತು ರೈಲು ಸೇವೆ ಮರುಸ್ಥಾಪನೆ ಕಾರ್ಯದ ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳೊಂದಿಗೆ ಅಪಘಾತ ಪರಿಹಾರ ವೈದ್ಯಕೀಯ ರೈಲು ಈಗಾಗಲೇ ಲುಮ್ಡಿಂಗ್‌ನಿಂದ ಸ್ಥಳಕ್ಕೆ ತೆರಳಿದೆ.

ಲುಮ್ಡಿಂಗ್-ಬದರ್‌ಪುರ್ ಸಿಂಗಲ್ ಲೈನ್ ಬೆಟ್ಟದ ವಿಭಾಗದಲ್ಲಿ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!