ಸಾಂದರ್ಭಿಕ ಚಿತ್ರ 
ದೇಶ

ಜೈಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದಾಳಿ, 10 ಮಂದಿಗೆ ಗಾಯ

ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಜೈಪುರ: ಜೈಪುರದ ದೇವಸ್ಥಾನವೊಂದರ ಧಾರ್ಮಿಕ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಈ ವಿಷಯದ ಬಗ್ಗೆ ವಾಗ್ವಾದದ ನಂತರ, ಆರೋಪಿಗಳು ಇತರರನ್ನು ಕರೆದು ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದರು. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ನಸೀಬ್ ಚೌಧರಿ ಮತ್ತು ಆತನ ಮಗನನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಕೆಲವರು ತಡರಾತ್ರಿ ದೆಹಲಿ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು