ಶ್ರೀಕಾಂತ್ ಪಂಗರ್ಕರ್ online desk
ದೇಶ

ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಗೌರಿ ಲಂಕೇಶ್ ಹತ್ಯೆ ಆರೋಪಿ

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು ಮತ್ತು ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತು.

ಮುಂಬೈ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೂ ಮುನ್ನ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಾಗಿದ್ದಾರೆ.

2017 ರ ಸೆ.05 ರಂದು ಗೌರಿ ಲಂಕೇಶ್ ಅವರನ್ನು ಅವರ ನಿವಾಸದ ಎದುರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಹಾರಾಷ್ಟ್ರದ ಏಜೆನ್ಸಿಗಳ ಸಹಾಯದಿಂದ ಕರ್ನಾಟಕದಲ್ಲಿ ಪೊಲೀಸರು ನಡೆಸಿದ ತನಿಖೆಯು ಹಲವರನ್ನು ಬಂಧಿಸಲಾಗಿತ್ತು.

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು ಮತ್ತು ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತು. 2011 ರಲ್ಲಿ ಶಿವಸೇನೆಯಿಂದ ಟಿಕೆಟ್ ನಿರಾಕರಿಸಿದ ನಂತರ, ಪಂಗರ್ಕರ್ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು.

ಅವರು ಶುಕ್ರವಾರ (ಅ.18) ರಂದು ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದರು.

"ಪಂಗಾರ್ಕರ್ ಅವರು ಮಾಜಿ ಶಿವಸೈನಿಕರಾಗಿದ್ದು ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ" ಎಂದು ಖೋಟ್ಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಲ್ನಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ, ಆದರೆ ಮಹಾಯುತಿಯಲ್ಲಿ (ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿ) ಸೀಟು ಹಂಚಿಕೆ ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ಖೋಟ್ಕರ್ ತಿಳಿಸಿದ್ದಾರೆ. ಈ ಸ್ಥಾನವನ್ನು ಕಾಂಗ್ರೆಸ್‌ನ ಕೈಲಾಶ್ ಗೊರಂಟ್ಯಾಲ್ ಹೊಂದಿದ್ದಾರೆ.

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT