ಬಾಂಬ್ ಬೆದರಿಕೆ ಕರೆ (ಸಂಗ್ರಹ ಚಿತ್ರ) online desk
ದೇಶ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅಪರಾಧಿಗಳನ್ನು ಶಿಕ್ಷಿಸಲು ಕಾನೂನು ಜಾರಿಗೆ ಕೇಂದ್ರದ ಚಿಂತನೆ

ಸುಳ್ಳು ಬಾಂಬ್ ಬೆದರಿಕೆ ಪ್ರಕರಣಗಳಲ್ಲಿ ಆರೋಪಿಗಳಿಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲು BCAS ಪ್ರಸ್ತಾಪಿಸಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ನವದೆಹಲಿ: ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಯೊಡ್ಡುವ ವ್ಯಕ್ತಿಗಳನ್ನು ಪತ್ತೆ ಮಾಡಲು ಗುಪ್ತಚರ ಹಾಗೂ ಸೈಬರ್ ಭದ್ರತೆ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.

ಇಂತಹ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸರ್ಕಾರ ಕಾನೂನು ಜಾರಿಗೊಳಿಸುವುದರ ಬಗ್ಗೆ ಚಿಂತನೆ ನಡೆಸುತ್ತಿದೆ. ಭಾರತ ಅಥವಾ ಬೇರೆ ಯಾವುದೇ ಸ್ಥಳಗಳಿಂದ ಬಾಂಬ್ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕ್ರಮ ಜರುಗಿಸುವ ನಿಟ್ಟಿನಲ್ಲಿ ಈ ಕಾನೂನು ರೂಪುಗೊಳ್ಳಲಿದೆ ಎಂದು ತಿಳಿದುಬಂದಿದೆ.

ಭಾರತವನ್ನು ಆರ್ಥಿಕವಾಗಿ ತೀವ್ರವಾಗಿ ಬಾಧಿಸುತ್ತಿರುವ ಇಂತಹ ಚಟುವಟಿಕೆಗಳ ಹಿಂದಿನ ನಿಜವಾದ ಅಪರಾಧಿಗಳನ್ನು ಏಜೆನ್ಸಿಗಳು ಕಂಡುಹಿಡಿಯುವವರೆಗೆ, ಪ್ರಸ್ತಾವಿತ ಕಾನೂನಿನಲ್ಲಿ ಕೇಂದ್ರ ಗೃಹ ಸಚಿವಾಲಯ (MHA) ನಿಬಂಧನೆಗಳ ಬಗ್ಗೆ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ನಿಂದ ಪ್ರಸ್ತಾವನೆಯನ್ನು ಕೋರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಳ್ಳು ಬಾಂಬ್ ಬೆದರಿಕೆ ಪ್ರಕರಣಗಳಲ್ಲಿ ಆರೋಪಿಗಳಿಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲು BCAS ಪ್ರಸ್ತಾಪಿಸಿದೆ ಎಂದು ಸರ್ಕಾರದ ಮೂಲವೊಂದು ತಿಳಿಸಿದೆ. ಏರ್‌ಕ್ರಾಫ್ಟ್ ಕಾಯ್ದೆ, 1934 ಮತ್ತು ಏರ್‌ಕ್ರಾಫ್ಟ್ ರೂಲ್ಸ್, 1937 ಗೆ ತಿದ್ದುಪಡಿಗಳನ್ನು ತರಲು, MHA ಕಾನೂನು ಮತ್ತು ನ್ಯಾಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದೊಂದಿಗೆ ಸಮಾಲೋಚನಾ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್