ಸಾಂದರ್ಭಿಕ ಚಿತ್ರ 
ದೇಶ

ಶನಿವಾರ ಒಂದೇ ದಿನ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ!

ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ನವದೆಹಲಿ/ಮುಂಬೈ: ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಶನಿವಾರ ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಇಂಡಿಗೋದ ದೆಹಲಿ ಮತ್ತು ಮುಂಬೈನಿಂದ ಇಸ್ತಾನ್‌ಬುಲ್‌ಗೆ ಹಾಗೂ ಜೋಧ್‌ಪುರದಿಂದ ದೆಹಲಿಗೆ ಮತ್ತು ಉದಯಪುರದಿಂದ ಮುಂಬೈ ವಿಸ್ತಾರಾ ವಿಮಾನಗಳಿಗೂ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ಇಂಡಿಗೋ, ಎರಡು ಪ್ರತ್ಯೇಕ ಹೇಳಿಕೆಗಳಲ್ಲಿ, ಮುಂಬೈನಿಂದ ಇಸ್ತಾನ್‌ಬುಲ್‌ಗೆ 6E 17 ಮತ್ತು ದೆಹಲಿಯಿಂದ ಇಸ್ತಾನ್‌ಬುಲ್‌ಗೆ 6E 11 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಿದೆ.

ವಿಮಾನಯಾನ ಸಂಸ್ಥೆಯು ಸಂಬಂಧಿತ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಇಂಡಿಗೋ ತಿಳಿಸಿದೆ.

"ವಿಮಾನ 6E 184, ಜೋಧ್‌ಪುರದಿಂದ ದೆಹಲಿಗೆ ಕಾರ್ಯನಿರ್ವಹಿಸುತ್ತಿದ್ದು, ಭದ್ರತೆಗೆ ಸಂಬಂಧಿಸಿದ ಎಚ್ಚರಿಕೆಯನ್ನು ಸ್ವೀಕರಿಸಿದೆ ಎಂದು ಹೇಳಿದೆ.

ಲ್ಯಾಂಡಿಂಗ್‌ಗೆ ಸ್ವಲ್ಪ ಮೊದಲು, ಉದಯಪುರದಿಂದ ಮುಂಬೈಗೆ ತೆರಳುತ್ತಿದ್ದ ಯುಕೆ 624 ವಿಮಾನವು ಭದ್ರತಾ ಆತಂಕ ಹೊಂದಿತ್ತು ಮತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ವಿಮಾನವನ್ನು ಕಡ್ಡಾಯ ತಪಾಸಣೆಗೆ ಒಳಪಡಿಸಲಾಯಿತು ಎಂದು ವಿಸ್ತಾರಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಭಾರತೀಯ ವಿಮಾನಯಾನ ಸಂಸ್ಥೆಗಳ 40ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ತಪಾಸಣೆಯ ನಂತರ ಹುಸಿ ಬಾಂಬ್ ಎಂದು ಸಾಬೀತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT