ಸಂಜಯ್ ರಾವತ್ online desk
ದೇಶ

ಮಹಾರಾಷ್ಟ್ರ: 210 ಕ್ಷೇತ್ರಗಳ ಸ್ಥಾನ ಹಂಚಿಕೆಯಲ್ಲಿ MVAಗೆ ಒಮ್ಮತ- ರಾವುತ್

ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳ ಸೋಲನ್ನು ಖಚಿತಪಡಿಸುವುದು MVA ಗುರಿಯಾಗಿದೆ ಎಂದು ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂಬೈ: ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳ ಪೈಕಿ 210 ಕ್ಷೇತ್ರಗಳಲ್ಲಿ ಸ್ಥಾನ ಹಂಚಿಕೆ ವಿಷಯದಲ್ಲಿ ಮಹಾ ವಿಕಾಸ್ ಅಘಾಡಿ ಒಮ್ಮತಕ್ಕೆ ಬಂದಿದೆ. ಇದು "ಮಹತ್ವದ ಸಾಧನೆ" ಎಂದು ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಪಕ್ಷದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳ ಸೋಲನ್ನು ಖಚಿತಪಡಿಸುವುದು MVA ಗುರಿಯಾಗಿದೆ ಎಂದು ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.

"ನಾವು 210 ಸ್ಥಾನಗಳಲ್ಲಿ ಒಮ್ಮತಕ್ಕೆ ಬಂದಿದ್ದೇವೆ. ಇದು ಗಮನಾರ್ಹ ಸಾಧನೆಯಾಗಿದೆ. ನಾವು ಜಂಟಿ ಶಕ್ತಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಗುರಿ ಹೊಂದಿದ್ದೇವೆ ಮತ್ತು ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳನ್ನು ನಾವು ಸೋಲಿಸುತ್ತೇವೆ" ಎಂದು ರಾವತ್, ಹೇಳಿದ್ದಾರೆ.

MVA ಶಿವಸೇನೆ-ಉದ್ಧವ್ ಠಾಕ್ರೆ ಬಣ, ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ NCP-SP ನ್ನು ಒಳಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಎಂವಿಎಯಿಂದ ಹೊರಬಂದು ಎಲ್ಲಾ 288 ಸ್ಥಾನಗಳಲ್ಲಿ ಸ್ವಂತವಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂಬ ಸುದ್ದಿ ವಾಹಿನಿಗಳ ವರದಿಗಳ ನಡುವೆ ರಾವುತ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕಳೆದ ಕೆಲವು ದಿನಗಳಲ್ಲಿ ಸ್ಥಾನ ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಮೂರು ಪ್ರಮುಖ ವಿರೋಧ ಪಕ್ಷಗಳ ನಡುವೆ ತೀವ್ರವಾದ ಮಾತುಕತೆಗಳು ನಡೆದಿವೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಮತ್ತು ಶಿವಸೇನೆ-ಯುಬಿಟಿ ಸಮಾನ ಮನಸ್ಸಿನಲ್ಲಿಲ್ಲ ಎಂಬ ಊಹಾಪೋಹಗಳಿತ್ತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ರಾವತ್ ಅವರ ಹೇಳಿಕೆ ಗಮನಾರ್ಹವಾಗಿದೆ. ಮಿತ್ರಪಕ್ಷಗಳಾಗಿದ್ದ ಶಿವಸೇನೆ-ಯುಬಿಟಿ ಮತ್ತು ಬಿಜೆಪಿ ಮತ್ತೆ ಒಟ್ಟಾಗುವ ಬಗ್ಗೆ ಇತ್ತೀಚೆಗೆ ವದಂತಿಗಳು ಹಬ್ಬಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT