ಗಾಜಿನ ಬಾಟಲಿ ಹೊಡೆದ TMC ನಾಯಕ 
ದೇಶ

ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ Waqf Bill ಜಟಾಪಟಿ: ಗಾಜಿನ ಬಾಟಲಿ ಹೊಡೆದ TMC ನಾಯಕ; ಅಮಾನತು ಶಿಕ್ಷೆ!

ಕೇಂದ್ರ ಸರ್ಕಾರದ ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ, ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಕೋಪದಿಂದ ಗಾಜಿನ ನೀರಿನ ಬಾಟಲಿ ಹೊಡೆದಿದ್ದು ಈ ವೇಳೆ ಅವರ ಕೈ ಬೆರಳುಗಳಿಗೆ ಗಾಯವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ನವದೆಹಲಿ: ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ BJP ಮತ್ತು TMC ನಾಯಕರ ನಡುವೆ ಜಟಾಪಟಿ ನಡೆದಿದ್ದು ಈ ವೇಳೆ ಟಿಎಂಸಿ ನಾಯಕ ಗಾಜಿನ ಬಾಟಲಿ ಹೊಡೆದು ಕೈಗೆ ಗಾಯ ಮಾಡಿಕೊಂಡ ಘಟನೆ ವರದಿಯಾಗಿದೆ.

ಹೌದು.. ಕೇಂದ್ರ ಸರ್ಕಾರದ ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ, ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಕೋಪದಿಂದ ಗಾಜಿನ ನೀರಿನ ಬಾಟಲಿ ಹೊಡೆದಿದ್ದು ಈ ವೇಳೆ ಅವರ ಕೈ ಬೆರಳುಗಳಿಗೆ ಗಾಯವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಮತ್ತು ಪಶ್ಚಿಮ ಬಂಗಾಳದ ಶ್ರೀರಾಮಪುರ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ ನಡುವೆ ತೀವ್ರ ವಾಗ್ವಾದ ನಡೆಯಿತು. ಈ ಸಂದರ್ಭದಲ್ಲಿ, ಕಲ್ಯಾಣ್ ಬ್ಯಾನರ್ಜಿ ಕೋಪದಿಂದ ಗಾಜಿನ ನೀರಿನ ಬಾಟಲಿಯನ್ನು ಒಡೆದರು. ಇದರಿಂದಾಗಿ ಅವರ ಬೆರಳಿಗೆ ಗಾಯವಾಯಿತು.

ಬ್ಯಾನರ್ಜಿ ಕೋಪದಿಂದ ನೀರಿನ ಗಾಜಿನ ಬಾಟಲಿಯನ್ನು ಎತ್ತಿಕೊಂಡು ಮೇಜಿನ ಮೇಲೆ ಬಲವಾಗಿ ಹೊಡೆದರು. ಈ ವೇಳೆ ಅವರ ಹೆಬ್ಬೆರಳು ಮತ್ತು ತೋರು ಬೆರಳಿಗೆ ಗಾಯವಾಯಿತು. ನಂತರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರನ್ನು ಸಭೆಯಿಂದ ಹೊರಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದರು ಎನ್ನಲಾಗಿದೆ.

ಬಿಜೆಪಿ ಸಂಸದರಾದ ಜಗದಾಂಬಿಕಾ ಪಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಚರ್ಚೆಯ ವೇಳೆ ಕಲ್ಯಾಣ್ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಅಭಿಜಿತ್ ಗಂಗೋಪಾಧ್ಯಾಯ ನಡುವೆ ತೀವ್ರ ವಾಗ್ವಾದ ನಡೆಯಿತು, ನಂತರ ಪರಿಸ್ಥಿತಿ ಹದಗೆಟ್ಟಿತು. ವಕ್ಫ್ ಮಸೂದೆ ಮೇಲಿನ ಚರ್ಚೆಯ ವೇಳೆ ಕೆಲವು ಪ್ರತಿಪಕ್ಷ ಸದಸ್ಯರು ನಿವೃತ್ತ ನ್ಯಾಯಮೂರ್ತಿಗಳು ಮತ್ತು ವಕೀಲರ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಎತ್ತಿದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಕಲ್ಯಾಣ್ ಬ್ಯಾನರ್ಜಿ ಅವರ ಈ ಅಶಿಸ್ತಿನ ವರ್ತನೆಗಾಗಿ ಅವರನ್ನು ವಕ್ಫ್ ಮಸೂದೆಯ ಜೆಪಿಸಿಯಿಂದ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.

ಪರ-ವಿರೋಧ ನಿಲುವು

ಇನ್ನು ವಕ್ಫ್ ಮಸೂದೆಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು. ಪ್ರತಿಪಕ್ಷಗಳ ಸದಸ್ಯರು ಮಸೂದೆಯ ಸಮಾಲೋಚನೆ ಪ್ರಕ್ರಿಯೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರೆ, ಬಿಜೆಪಿ ಸಂಸದರು ಮಸೂದೆಯನ್ನು ಸಮರ್ಥಿಸಿಕೊಂಡರು. ರಾಜಕೀಯ ಕಾರಣಗಳಿಗಾಗಿ ಈ ಮಸೂದೆಯನ್ನು ತರಲಾಗುತ್ತಿದೆ ಮತ್ತು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸುವ ಗುರಿ ಹೊಂದಿದೆ ಎಂದು ಪ್ರತಿಪಕ್ಷದ ಕೆಲವು ಸದಸ್ಯರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮಸೂದೆ ತರುವ ‘ತರಾತುರಿ’ ಬಗ್ಗೆಯೂ ಪ್ರಶ್ನೆಗಳನ್ನು ಎತ್ತಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!