ಛೋಟಾ ರಾಜನ್ 
ದೇಶ

Chhota Rajan: ಗ್ಯಾಂಗ್ ಸ್ಟರ್ ಗೆ ಬಿಗ್ ರಿಲೀಫ್; ಜೀವಾವಧಿ ಶಿಕ್ಷೆ ಅಮಾನತು ಮಾಡಿದ ಹೈಕೋರ್ಟ್, ಜಾಮೀನು ಮಂಜೂರು!

ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಬಾಂಬೇ ಹೈಕೋರ್ಟ್ ಬುಧವಾರ ಅಮಾನತು ಮಾಡಿದ್ದು, ಅಲ್ಲದೆ ಅವನಿಗೆ ಜಾಮೀನು ಮಂಜೂರು ಮಾಡಿದೆ.

2001ರಲ್ಲಿ ನಡೆದಿದ್ದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬ್ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ವಿಶೇಷ ಮೋಕಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಛೋಟಾ ರಾಜನ್ ಸಲ್ಲಿಸಿರುವ ಮೇಲ್ಮನವಿ ತೀರ್ಮಾನವಾಗುವವರೆಗೂ, ಆತನ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವ ನ್ಯಾ. ರೇವತಿ ಮೋಹಿತೆ-ಡೇರೆ ಹಾಗೂ ಪೃಥ್ವಿರಾಜ್ ಚವಾಣ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಜಾಮೀನನ್ನೂ ಮಂಜೂರು ಮಾಡಿದೆ.

ಏನಿದು ಪ್ರಕರಣ?

ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ಎರಡನೆ ಪ್ರಕರಣ ಇದಾಗಿದ್ದು, 2011ರಲ್ಲಿ ನಡೆದಿದ್ದ ಪತ್ರಕರ್ತ ಜ್ಯೋತಿರ್ಮೊಯ್ ಡೇ ಹತ್ಯೆ ಪ್ರಕರಣದಲ್ಲಿ ಆತ ಸೆರೆವಾಸ ಅನುಭವಿಸುತ್ತಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ