ಲಾರಿಗೆ ಡಿಕ್ಕಿ ಹೊಡೆದ ಕಾರು 
ದೇಶ

ಕೇರಳ: ಲಾರಿಗೆ ಡಿಕ್ಕಿ ಹೊಡೆದ ಕಾರು, ಐವರ ಸಾವು

ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ.

ಪಾಲಕ್ಕಾಡ್: ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪನಕಾವು ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಪಾಲಕ್ಕಾಡ್ ಕಡೆಯಿಂದ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ಲಾರಿಯಡಿ ಸಿಲುಕಿ ನಜ್ಜು ಗುಜ್ಜಾಗಿದೆ.

ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರನ್ನು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ತಪ್ಪಿ ಕೊಯಮತ್ತೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು.

ಅಪಘಾತದಲ್ಲಿ ತಮಿಳುನಾಡು ಮೂಲದ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಅವಘಡದ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಬುಧವಾರ ಮಧ್ಯಾಹ್ನದವರೆಗೆ ಪಾಲಕ್ಕಾಡ್ ವಿಧಾನಸಭಾ ಉಪಚುನಾವಣೆಯ ಪ್ರಚಾರವನ್ನು ಸ್ಥಗಿತಗೊಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!