ಸಿಜೆಐ ಸಂಜೀವ್ ಖನ್ನಾ (ಬಲಭಾಗದ ಫೋಟೋ) ನ್ಯಾ. ಚಂದ್ರಚೂಡ್( ಎಡಭಾಗದ ಫೋಟೋ) Photo | PTI
ದೇಶ

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ನೇಮಕ, ನವೆಂಬರ್ 11 ರಂದು ಪ್ರಮಾಣವಚನ

ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8, 2022 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡರು.

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಸಿಜೆಐ ಡಿ ವೈ ಚಂದ್ರಚೂಡ್ ನೇಮಕ ಮಾಡಿದ್ದಾರೆ.

ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವು ದಿನಗಳ ನಂತರ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ.

ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ನ್ಯಾಯಮೂರ್ತಿ ಚಂದ್ರಚೂಡ್ ನವೆಂಬರ್ 8, 2022 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡರು.

CJI ಚಂದ್ರಚೂಡ್ ಅವರ ಅವಧಿ ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಭಾರತದ 51ನೇ CJI ಆಗಿರುತ್ತಾರೆ ಮತ್ತು 65 ನೇ ವಯಸ್ಸಿನಲ್ಲಿ ಮೇ 13, 2025 ರಂದು ನಿವೃತ್ತರಾಗುವ ಮೊದಲು ಆರು ತಿಂಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

"ಭಾರತದ ಸಂವಿಧಾನ ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT