ಎನ್ ಸಿಪಿ ಸೇರ್ಪಡೆಯಾದ ಜೀಶನ್ ಸಿದ್ಧಕಿ 
ದೇಶ

ಬಾಬಾ ಸಿದ್ದೀಕಿ ಪುತ್ರ NCP ಸೇರ್ಪಡೆ: ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಕಣಕ್ಕೆ

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು.

ಮುಂಬೈ: ಇತ್ತೀಚೆಗಷ್ಟೇ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ಹತ್ಯೆಗೀಡಾದ ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಶುಕ್ರವಾರ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದಾರೆ.

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಇದನ್ನು ಭಾವನಾತ್ಮಕ ಕ್ಷಣ ಎಂದು ಕರೆದ ಜೀಶನ್, 2019 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದಿರುವ ಬಾಂದ್ರಾ ಪೂರ್ವ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಯಿಂದ ಸ್ಪರ್ಧಿಸುವುದಾಗಿ ಹೇಳಿದರು.ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಜಿತ್ ಪವಾರ್, ಪ್ರಫುಲ್ ಪಟೇಲ್, ಸುನೀಲ್ ತಟ್ಕರೆ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಪ್ರೀತಿಯಿಂದ ಮತ್ತು ಎಲ್ಲಾ ಜನರ ಬೆಂಬಲದಿಂದ ನಾನು ಖಂಡಿತವಾಗಿಯೂ ಬಾಂದ್ರಾ ಪೂರ್ವವನ್ನು ಮತ್ತೊಮ್ಮೆ ಗೆಲ್ಲುತ್ತೇನೆ, ”ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಪಾಕಿಸ್ತಾನ: ಖೈಬರ್ ಪಖ್ತುಂಕ್ವಾದ ಪೊಲೀಸ್ ಕೇಂದ್ರದ ಬಳಿ ಕಾರು ಬಾಂಬ್ ಸ್ಫೋಟ; 16 ಮಂದಿ ಸಾವು

ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ? ಲೀಟರ್‌ ಹಾಲಿಗೆ ₹8 ಏರಿಕೆಗೆ ಒಕ್ಕೂಟಗಳ ಪ್ರಸ್ತಾವನೆ!

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿಥಾರಿ ಹತ್ಯಾಕಾಂಡದ ಆರೋಪಿ ಸುರೇಂದ್ರ ಕೋಲಿ ಹರಿದ್ವಾರದಲ್ಲಿ ಶವವಾಗಿ ಪತ್ತೆ!