ರಿಯಾ ಚಕ್ರವರ್ತಿ(ಸಂಗ್ರಹ ಚಿತ್ರ) 
ದೇಶ

ನಟಿ ರಿಯಾ ಚಕ್ರವರ್ತಿ ವಿರುದ್ಧದ ಲುಕ್‌ಔಟ್ ನೋಟಿಸ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಿಯಾ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಆಕೆಯ ತಂದೆ ಲೆಫ್ಟಿನೆಂಟ್ ಕರ್ನಲ್ ಇಂದ್ರಜಿತ್ ಚಕ್ರವರ್ತಿ(ಸೇನಾ ಯೋಧ) ವಿರುದ್ಧ ಸಿಬಿಐ ಲುಕ್-ಔಟ್ ನೋಟಿಸ್ ಹೊರಡಿಸಿತ್ತು.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಮತ್ತು ಅವರ ತಂದೆ ಹಾಗೂ ಸಹೋದರನ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್‌ಔಟ್ ನೋಟಿಸ್(ಎಲ್‌ಒಸಿ)ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿ ಹಿಡಿದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಿಯಾ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಆಕೆಯ ತಂದೆ ಲೆಫ್ಟಿನೆಂಟ್ ಕರ್ನಲ್ ಇಂದ್ರಜಿತ್ ಚಕ್ರವರ್ತಿ(ಸೇನಾ ಯೋಧ) ವಿರುದ್ಧ ಸಿಬಿಐ ಲುಕ್-ಔಟ್ ನೋಟಿಸ್ ಹೊರಡಿಸಿತ್ತು. ಇದನ್ನು ಬಾಂಬ್ ಹೈಕೋರ್ಟ್ ರದ್ದುಗೊಳಿಸಿತ್ತು.

ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠ, ಸಿಬಿಐನ ಅರ್ಜಿ ಅತ್ಯಂತ "ಕ್ಷುಲ್ಲಕ" ಎಂದು ಕರೆದಿದೆ. ಆರೋಪಿಗಳಲ್ಲಿ ಒಬ್ಬರು ಉನ್ನತ ವ್ಯಕ್ತಿಗಳಾಗಿರುವುದರಿಂದ ಅರ್ಜಿ ಸಲ್ಲಿಸಲಾಗಿದೆ ಎಂದು ಟೀಕಿಸಿದೆ.

ಜೂನ್ 12, 2020ರಂದು ನಟ ಸುಶಾಂತ್ ಸಿಂಗ್ ಅವರ ಮೃತದೇಹ ಬಾಂದ್ರಾದಲ್ಲಿರುವ ಅವರ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ನಟನ ಕುಟುಂಬಸ್ಥರು ನಟಿ ರಿಯಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!