ಬಾಲಸೋರ್ ಜಿಲ್ಲೆಯ ಅನಂತಪುರ ಗ್ರಾಮದಲ್ಲಿ ಡಾನಾ ಚಂಡಮಾರುತ ಪರಿಣಾಮ ಮನೆಯೊಂದರ ಮೇಲೆ ಬಿದ್ದ ಮರವನ್ನು NDRF ಸಿಬ್ಬಂದಿ ಕತ್ತರಿಸುತ್ತಿದ್ದಾರೆ. 
ದೇಶ

ಡಾನಾ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಇನ್ನಿಬ್ಬರು ಸಾವು, ಮೃತರ ಸಂಖ್ಯೆ 4ಕ್ಕೆ ಏರಿಕೆ

ಚಂದನ್ ದಾಸ್ (31ವ) ಎಂಬ ನಾಗರಿಕ ಸ್ವಯಂಸೇವಕ, ಪುರ್ಬಾ ಬರ್ಧಮಾನ್ ಜಿಲ್ಲೆಯ ಬಡ್ ಬಡ್‌ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಪೊಲೀಸ್ ತಂಡದೊಂದಿಗೆ ಹೊರಹೋಗಿದ್ದ ವೇಳೆ ದುರ್ಘಟನೆ ನಡೆದಿದೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತದಿಂದ ಮತ್ತಿಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂದನ್ ದಾಸ್ (31ವ) ಎಂಬ ನಾಗರಿಕ ಸ್ವಯಂಸೇವಕ, ಪುರ್ಬಾ ಬರ್ಧಮಾನ್ ಜಿಲ್ಲೆಯ ಬಡ್ ಬಡ್‌ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಪೊಲೀಸ್ ತಂಡದೊಂದಿಗೆ ಹೊರಹೋಗಿದ್ದ ವೇಳೆ ದುರ್ಘಟನೆ ನಡೆದಿದೆ.

ತಂತಿಪಾರಾದಲ್ಲಿ ಜಲಾವೃತ ರಸ್ತೆಯಲ್ಲಿ ಹೌರಾ ಮುನ್ಸಿಪಲ್ ಕಾರ್ಪೊರೇಶನ್‌ನ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದೆ. ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ರಾಜ್ಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದರು. ದಕ್ಷಿಣ 24 ಪರಗಣ ಜಿಲ್ಲೆಯ ಪಥರ್‌ಪ್ರತಿಮಾದಲ್ಲಿ ಒಬ್ಬರು ಮೃತಪಟ್ಟರೆ, ಮತ್ತೊಬ್ಬರು ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ.

ಡಾನಾ ಚಂಡಮಾರುತ ನಿನ್ನೆ ಮುಂಜಾನೆ ಪೂರ್ವ ಕರಾವಳಿಗೆ ಅಪ್ಪಳಿಸಿತು, ಧಾರಾಕಾರ ಮಳೆ ಮತ್ತು ಹೆಚ್ಚಿನ ವೇಗದಲ್ಲಿ ಗಾಳಿ ಬೀಸಿ ಮರಗಳು ಮತ್ತು ವಿದ್ಯುತ್ ಕಂಬಗಳನ್ನು ಕಿತ್ತುಹಾಕಿತು. ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ನಾಗರಿಕರ ಮೂಲಸೌಕರ್ಯಗಳು ಮತ್ತು ಬೆಳೆಗಳಿಗೆ ಹಾನಿಯುಂಟಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!