ವೀರೇಂದ್ರ ಸಚ್‌ದೇವ 
ದೇಶ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

ದೆಹಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಪ್ರತಿಭಟನಾರ್ಥವಾಗಿ ಎರಡು ದಿನಗಳ ಹಿಂದೆ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ವೀರೇಂದ್ರ ಸಚ್‌ದೇವ ಅವರಿಗೆ ಉಸಿರಾಟದ ತೊಂದರೆ ಹಾಗೂ ತೀವ್ರವಾದ ಚರ್ಮ ತುರಿಕೆ ಆರಂಭವಾಗಿದೆ.

ನವದೆಹಲಿ: ನಾಟಕೀಯ ಘಟನೆಯೊಂದರಲ್ಲಿ, ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮ್ ಮನೋಹರ್ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಪ್ರತಿಭಟನಾರ್ಥವಾಗಿ ಎರಡು ದಿನಗಳ ಹಿಂದೆ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ವೀರೇಂದ್ರ ಸಚ್‌ದೇವ ಅವರಿಗೆ ಉಸಿರಾಟದ ತೊಂದರೆ ಹಾಗೂ ತೀವ್ರವಾದ ಚರ್ಮ ತುರಿಕೆ ಆರಂಭವಾಗಿದೆ. ಹೀಗಾಗಿ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಮಾತನಾಡಿ, ಸಚ್‌ದೇವ ಅವರು ತೀವ್ರ ತುರಿಕೆ ಸಮಸ್ಯೆಯಿಂದ ಆಸ್ಪತ್ರೆಯ ಚರ್ಮರೋಗ ವಿಭಾಗಕ್ಕೆ ದಾಖಲಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆಯು ಇದೆ ಎಂದು ಹೇಳಿದ್ದಾರೆ.

"ವೀರೇಂದ್ರ ಸಚ್‌ದೇವ ಆರೋಗ್ಯ ಈಗ ಸ್ಥಿರವಾಗಿದೆ, ಅವರಿಗೆ ಈ ಹಿಂದೆ ಚರ್ಮ ತುರಿಕೆ ಅಥವಾ ಉಸಿರಾಟದ ಸಮಸ್ಯೆ ಇರಲಿಲ್ಲ” ಎಂದು ಪ್ರವೀಣ್ ಶಂಕರ್ ಕಪೂರ್ ಹೇಳಿದ್ದಾರೆ.

ಯಮುನಾ ನದಿ ಶುದ್ಧೀಕರಣಕ್ಕೆ ಕೇಂದ್ರ ಸರ್ಕಾರ ಒದಗಿಸಿದ್ದ 8,500 ಕೋಟಿ ರೂಪಾಯಿ ಅನ್ನು ಆಪ್ ಸರ್ಕಾರ ದುರಪಯೋಗಪಡಿಸಿಕೊಂಡಿದ್ದು, ಆ ಮೊತ್ತಕ್ಕೆ ದೆಹಲಿ ಸರ್ಕಾರ ಲೆಕ್ಕ ನೀಡಬೇಕು ಎಂದು ಸಚ್‌ದೇವ ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!