ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ ಚುನಾವಣೆ: 22 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಇಬ್ಬರು ಶಾಸಕರಿಗೆ ಕೊಕ್

ಶಿವಸೇನೆ ಮತ್ತು ಎನ್‌ಸಿಪಿ ಒಳಗೊಂಡ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿರುವ ಕೇಸರಿ ಪಕ್ಷ ಇದುವರೆಗೆ 121 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಶನಿವಾರ ತನ್ನ 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ.

ಶಿವಸೇನೆ ಮತ್ತು ಎನ್‌ಸಿಪಿ ಒಳಗೊಂಡ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿರುವ ಕೇಸರಿ ಪಕ್ಷ ಇದುವರೆಗೆ 121 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಎರಡನೇ ಪಟ್ಟಿಯಲ್ಲಿ, ಅಕೋಟ್, ನಾಸಿಕ್ ಸೆಂಟ್ರಲ್, ಪೆನ್, ಖಡಕ್ವಾಸಲಾ, ಪುಣೆ ಕಂಟೋನ್ಮೆಂಟ್ ಮತ್ತು ಉಲ್ಲಾಸನಗರದ ಶಾಸಕರಿಗೆ ಟಿಕೆಟ್ ನೀಡಿದ್ದು, ವಾಶಿಮ್ ಮತ್ತು ಗಡ್ಚಿರೋಲಿಯ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಜಾಟ್‌ನಿಂದ ಗೋಪಿಚಂದ್ ಪಡಲ್ಕರ್ ಮತ್ತು ಲಾತೂರ್ ಗ್ರಾಮಾಂತರದಿಂದ ರಮೇಶ್ ಕರದ್ ಅವರನ್ನು ಕಣಕ್ಕಿಳಿಸಲಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT