ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: 17 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

ಖಲ್ತಾ ಗ್ರಾಮದ ಆದಿವಾಸಿಗಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಕಲ್ಪೇಶ್ ಬರಿಯಾ ಎಂದು ಗುರುತಿಸಲಾಗಿದೆ.

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯ ವಸತಿ ಶಾಲೆಯ ಒಂಬತ್ತನೇ ತರಗತಿಯ ಬುಡಕಟ್ಟು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಖಲ್ತಾ ಗ್ರಾಮದ ಆದಿವಾಸಿಗಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಕಲ್ಪೇಶ್ ಬರಿಯಾ ಎಂದು ಗುರುತಿಸಲಾಗಿದೆ ಎಂದು ಧನಪುರ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.

ಬರಿಯಾ ಗುರುವಾರ ಸಂಜೆ 17 ವರ್ಷದ ವಿದ್ಯಾರ್ಥಿನಿಯನ್ನು ಅಡುಗೆ ಮಾಡುವ ನೆಪದಲ್ಲಿ ಖಾಲ್ತಾ ಆಶ್ರಮಶಾಲಾ ಕ್ಯಾಂಪಸ್‌ನಲ್ಲಿರುವ ತನ್ನ ಕ್ವಾರ್ಟರ್ಸ್‌ಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ. ಶಿಕ್ಷಕ, ವಿದ್ಯಾರ್ಥಿನಿಯನ್ನು ಹಿಂಬದಿಯಿಂದ ಹಿಡಿದುಕೊಂಡಿದ್ದಾರೆ. ವಿದ್ಯಾರ್ಥಿನಿ ಆತನಿಂದ ತಪ್ಪಿಸಿಕೊಂಡು ಹೊರ ಬರುವಲ್ಲಿ ಯಶಸ್ವಿಯಾಗಿದ್ದು, ಸ್ಥಳಕ್ಕೆ ತನ್ನ ತಂಗಿಯನ್ನು ಕರೆದಿದ್ದಾಳೆ" ಎಂದು ಅಧಿಕಾರಿ ತಿಳಿಸಿದ್ದಾರೆ.

"ಅದೇ ಶಾಲೆಯಲ್ಲಿ ಓದುತ್ತಿರುವ ಆಕೆಯ ಒಡಹುಟ್ಟಿದವರಿಗೆ ಈ ವಿಷಯ ತಿಳಿದ ನಂತರ ಅವರು ತಮ್ಮ ತಂದೆಗೆ ಮಾಹಿತಿ ನೀಡಿದ್ದಾರೆ. ನಂತರ ಕುಟುಂಬದವರು, ಬರಿಯಾ ವಿರುದ್ಧ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿಕ್ಷಕನನ್ನು ಬಂಧಿಸಲಾಯಿತು" ಎಂದು ಅವರು ಹೇಳಿದ್ದಾರೆ.

ಬರಿಯಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 75(1)(i) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!