ಜೆಡಿಯು ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರು ಪ್ರಣವ್ ಪಾಂಡೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. 
ದೇಶ

ಬಿಹಾರ: ಕ್ರಿಕೆಟಿಗ ಇಶಾನ್ ಕಿಶನ್ ತಂದೆ ಜೆಡಿಯು ಸೇರ್ಪಡೆ

ಜೆಡಿಯು ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರು ಪ್ರಣವ್ ಪಾಂಡೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಪಾಟ್ನಾ: ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕ್ರಿಕೆಟಿಗ ಇಶಾನ್ ಕಿಶನ್ ಅವರ ತಂದೆ ಪ್ರಣವ್ ಪಾಂಡೆ ಅವರು ಭಾನುವಾರ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ(ಯುನೈಟೆಡ್) ಸೇರಿದ್ದಾರೆ.

ಜೆಡಿಯು ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರು ಪ್ರಣವ್ ಪಾಂಡೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

“ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದ ಮೇಲಿನ ನಂಬಿಕೆಯಿಂದಾಗಿ ಪ್ರಣವ್ ಪಾಂಡೆ ಅವರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇದು ವಿಶೇಷವಾಗಿ ಮಗಧ ಪ್ರದೇಶದಲ್ಲಿ ಪಕ್ಷಕ್ಕೆ ಹೆಚ್ಚು ಶಕ್ತಿ ನೀಡಲಿದೆ ಎಂದು ಸಂಜಯ್ ಝಾ ಹೇಳಿದರು.

ಜೆಡಿಯು ಸೇರಿದ ಬಳಿಕ ಮಾತನಾಡಿದ ಪಾಂಡೆ, “ನಾನು ಪಕ್ಷದ ಸೈನಿಕ ಮತ್ತು ಪಕ್ಷವನ್ನು ಬಲಪಡಿಸಲು ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತೇನೆ. ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಂತೋಷದಿಂದ ಸ್ವೀಕರಿಸಲು ಸಿದ್ಧನಿದ್ದೇನೆ ಎಂದರು.

ನವೆಂಬರ್ 13 ರಂದು ಬೆಳಗಂಜ್, ಇಮಾಮ್‌ಗಂಜ್, ರಾಮಗಢ ಮತ್ತು ತರಾರಿ ಎಂಬ ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

ಹಾಲಿ ಶಾಸಕರು ಲೋಕಸಭೆಗೆ ಸದಸ್ಯರಾಗಿ ಆಯ್ಕೆಯಾದ ನಂತರ ತೆರವಾದ ಈ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT