ಸಾಂದರ್ಭಿಕ ಚಿತ್ರ 
ದೇಶ

ಭತ್ತಕ್ಕೆ 2,300 ರೂ. ಬೆಂಬಲ ಬೆಲೆ; ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ

ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ.

ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ಬೀರಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿಯಲ್ಲಿಂದು ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ ನೀಡಿದರು.

2013-14 ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ರೂ.1,310 ಇದ್ದು, ಈಗ ಅದನ್ನು 2,300 ರೂಪಾಯಿಗೆ ಹೆಚ್ಚಿಸಲಾಗಿದೆ. ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಹಾಕಿಕೊಂಡಿದೆ ಎಂದರು.

ಭತ್ತದ ಬೆಳೆಗಾರರ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ. ಅಕ್ಟೋಬರ್ 1ರಿಂದ 2700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 LMT ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು.

ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ PEG ಯೋಜನೆಯಡಿ 31 LMT ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT