ಸಿಕಾರ್: ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ಬಸ್‌ವೊಂದು ಫ್ಲೈಓವರ್‌ನ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ ಮತ್ತು 34ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಮಾತನಾಡಿ, ಸಲಾಸರ್‌ನಿಂದ ಲಕ್ಷ್ಮಣಗಢಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ತಿರುವು ತೆಗೆದುಕೊಳ್ಳುವಾಗ ಲಕ್ಷ್ಮಣಗಢದ ಫ್ಲೈಓವರ್‌ನ ಒಂದು ಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.
ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 34 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಲಕ್ಷ್ಮಣಗಢ ಮತ್ತು ಸಿಕಾರ್ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅತಿಯಾದ ವೇಗವೇ ಬಸ್ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಲಕ್ಷ್ಮಣಗಢ ಪೊಲೀಸ್ ಠಾಣೆಯ ಎಎಸ್‌ಐ ರಾಮ್‌ದೇವ್ ಸಿಂಗ್ ಅವರು ಹೇಳಿದ್ದಾರೆ.