ಸಾಂದರ್ಭಿಕ ಚಿತ್ರ IANS
ದೇಶ

3 ಕ್ಯಾನ್ಸರ್ ನಿವಾರಕ ಔಷಧಿಗಳ ಬೆಲೆ ಕಡಿತಗೊಳಿಸುವಂತೆ ತಯಾರಕರಿಗೆ ಸರ್ಕಾರ ಸೂಚನೆ

2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಈ ಮೂರು ಕ್ಯಾನ್ಸರ್ ನಿವಾರಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವುದಾಗಿ ಘೋಷಿಸಲಾಗಿತ್ತು.

ನವದೆಹಲಿ: ಕಸ್ಟಮ್ಸ್ ಸುಂಕ ವಿನಾಯಿತಿ ಮತ್ತು ಜಿಎಸ್‌ಟಿ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಮೂರು ಕ್ಯಾನ್ಸರ್ ನಿವಾರಕ ಔಷಧಿಗಳ ಬೆಲೆ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರ ಮಂಗಳವಾರ ಕಂಪನಿಗಳಿಗೆ ಸೂಚಿಸಿದೆ.

ಕೈಗೆಟುಕುವ ಬೆಲೆಯಲ್ಲಿ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಬದ್ಧತೆಗೆ ಅನುಗುಣವಾಗಿ, ರಾಷ್ಟ್ರೀಯ ಔಷಧೀ ಬೆಲೆ ಪ್ರಾಧಿಕಾರವು ಮೂರು ಕ್ಯಾನ್ಸರ್ ನಿವಾರಕ ಔಷಧಿಗಳಾದ ಟ್ರಾಸ್ಟುಜುಮಾಬ್, ಒಸಿಮೆರ್ಟಿನಿಬ್ ಮತ್ತು ದುರ್ವಾಲುಮಾಬ್ ಬೆಲೆ ಕಡಿಮೆ ಮಾಡುವಂತೆ ಸಂಬಂಧಿಸಿದ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ.

2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಈ ಮೂರು ಕ್ಯಾನ್ಸರ್ ನಿವಾರಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವುದಾಗಿ ಘೋಷಿಸಲಾಗಿತ್ತು. ಈಗ ಅದನ್ನು ಅನುಸರಿಸುವಂತೆ ಕಂಪನಿಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂಬಂಧ ಕಂದಾಯ ಇಲಾಖೆ, ಹಣಕಾಸು ಸಚಿವಾಲಯವು ಕಳೆದ ಜುಲೈ 23 ರಂದು ಅಧಿಸೂಚನೆ ಹೊರಡಿಸಿದ್ದು, ಈ ವರ್ಷ ಮೂರು ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೂನ್ಯಕ್ಕೆ ಇಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ