ಸಿಎಂ ಪಿಣರಾಯಿ ವಿಜಯನ್ ಬೆಂಗಾವಲು ವಾಹನ ಸರಣಿ ಅಪಘಾತ 
ದೇಶ

ಸ್ಕೂಟಿ ಚಾಲಕಿ ಎಡವಟ್ಟು: ಕೇರಳ ಸಿಎಂ Pinarayi Vijayan ಬೆಂಗಾವಲು ವಾಹನಗಳು ಸರಣಿ ಅಪಘಾತ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾದ ಘಟನೆ ನಡೆದಿದೆ.

ಸೋಮವಾರ(ಅ.28) ಸಂಜೆ 6.30ರ ಸುಮಾರಿಗೆ ಸಂಭವಿಸಿದ್ದು, ಘಟನೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಎಲ್ಲ ಭದ್ರತಾ ಸಿಬ್ಬಂದಿಗಳೂ ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಬೆಂಗಾವಲು ಕಾರುಗಳು ಮಾತ್ರ ಅಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ.

ಸ್ಕೂಟಿ ಚಾಲಕಿ ಎಡವಟ್ಟು

ಮೂಲಗಳ ಪ್ರಕಾರ ಸಿಎಂ ಪಿಣರಾಯಿ ವಿಜಯನ್ ಕೊಟ್ಟಾಯಂಗೆ ಭೇಟಿ ನೀಡಿ ವಾಪಸ್ಸಾಗುವ ವೇಳೆ ತಿರುವನಂತಪುರಂ ಬಳಿ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ಏಕಾಏಕಿ ಬಲಕ್ಕೆ ತಿರುವು ತೆಗೆದುಕೊಂಡಿದ್ದಾರೆ. ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ಪಿಣರಾಯಿ ವಿಜಯನ್ ಬೆಂಗಾವಲು ವಾಹನಗಳು ಪೈಕಿ ಮುಂಭಾಗದಲ್ಲಿದ್ದ ವಾಹನ ಆಕೆಗೆ ಢಿಕ್ಕಿ ತಪ್ಪಿಸಿಲು ಬ್ರೇಕ್ ಹಾಕಿದೆ. ಈ ವೇಳೆ ಹಿಂದಿನಿಂದ ಬಂದ ವಾಹನಗಳು ಒಂದರ ಹಿಂದೆ ಒಂದರಂತೆ ಪರಸ್ಪರ ಢಿಕ್ಕಿಯಾಗಿವೆ. ಎಲ್ಲ ವಾಹನಗಳೂ ಬ್ರೇಕ್ ಹಾಕಿದ್ದರಿಂದ ಸಂಭಾವ್ಯ ದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.

ಈ ಘಟನೆ ಬಳಿಕ ಮುಖ್ಯಮಂತ್ರಿಗಳನ್ನು ಬೇರೆ ವಾಹನದ ಮೂಲಕ ಕಳುಹಿಸಿಕೊಡಲಾಯಿತು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು