ರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 4 ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ ಮತ್ತು ಎರಡು ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಹೇಳಿದ್ದಾರೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವೆಂಬರ್ 3 ರಂದು ಜಾರ್ಖಂಡ್ ನಲ್ಲಿ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಾರ್ಖಂಡ್‌ಗೆ ಬಿಜೆಪಿಯ ಚುನಾವಣಾ ಉಸ್ತುವಾರಿಯಾಗಿರುವ ಚೌಹಾಣ್, ಮೋದಿ ಅವರು ಚೈಬಾಸಾ ಮತ್ತು ಗರ್ಹ್ವಾದಲ್ಲಿ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರು ನವೆಂಬರ್ 2 ರಂದು ರಾಂಚಿಗೆ ಆಗಮಿಸಲಿದ್ದು, ಮರುದಿನ ಧಲ್ಭುಮ್‌ಗಢ್, ಬರ್ಕಥಾ ಮತ್ತು ಸಿಮಾರಿಯಾದಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಂಚಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಜಾರ್ಖಂಡ್‌ನ ಅಭಿವೃದ್ಧಿಗೆ ಇಲ್ಲಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ. ಜೆಎಂಎಂ-ಕಾಂಗ್ರೆಸ್ ಸರ್ಕಾರ ಇರುವವರೆಗೆ ರಾಜ್ಯದ ಜನ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದು ಚೌಹಾಣ್ ವಾಗ್ದಾಳಿ ನಡೆಸಿದರು.