ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಲ್ಮಾನ್‌ ಖಾನ್ ಗೆ ಮತ್ತೊಂದು ಜೀವ ಬೆದರಿಕೆ; ಮುಂಬೈ ವ್ಯಕ್ತಿ ಬಂಧನ

ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಮತ್ತು 2 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಾಂದ್ರಾ(ಪೂರ್ವ) ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್
Lingaraj Badiger
Updated On : 30 Oct 2024, 8:42 pm

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಎರಡು ಕೋಟಿ ರೂಪಾಯಿ ನೀಡುವಂತೆ ಮತ್ತೊಂದು ಕೊಲೆ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಿದ ಪೊಲೀಸರು ಮುಂಬೈನ ಬಾಂದ್ರಾ ನಿವಾಸಿಯನ್ನು ಬುಧವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಟ್ರಾಫಿಕ್ ಪೊಲೀಸರಿಗೆ ಮಂಗಳವಾರ ಅನಾಮಧೇಯ ಸಂದೇಶವೊಂದು ಬಂದಿದ್ದು, ಅದರಲ್ಲಿ 58 ವರ್ಷದ ನಟ 2 ಕೋಟಿ ರೂಪಾಯಿ ಪಾವತಿಸದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಈ ಸಂಬಂಧ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Advertisement

Also Read

ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವಬೆದರಿಕೆ: 2 ಕೋಟಿ ರೂ ಬೇಡಿಕೆ

ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಮತ್ತು 2 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಾಂದ್ರಾ(ಪೂರ್ವ) ನಿವಾಸಿ ಅಜಮ್ ಮೊಹಮ್ಮದ್ ಮುಸ್ತಫಾ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ಮುಂಬೈನ ಐಷಾರಾಮಿ ಪ್ರದೇಶವಾದ ಬಾಂದ್ರಾ(ಪಶ್ಚಿಮ) ದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement