ಸಾಂದರ್ಭಿಕ ಚಿತ್ರ 
ದೇಶ

ದೀಪಾವಳಿಯಂದು ಪಟಾಕಿ ಸಿಡಿಸಲು ತಮಿಳುನಾಡು ಸರ್ಕಾರ 2 ಗಂಟೆ ಕಾಲಾವಕಾಶ

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಜನರು ಹಬ್ಬದ ದಿನದಂದು(ಅಕ್ಟೋಬರ್ 31, 2024) ನಿಗದಿತ ಸಮಯದಲ್ಲಿ ಪಟಾಕಿಗಳನ್ನು ಸಿಡಿಸಬಹುದು.

ಚೆನ್ನೈ: ಜನರು ದೀಪಾವಳಿಯಂದು ಬೆಳಗ್ಗೆ 6 ರಿಂದ 7 ರವರೆಗೆ ಮತ್ತು ಸಂಜೆ 7 ರಿಂದ 8 ರವರೆಗೆ ಪಟಾಕಿ ಸಿಡಿಸಬಹುದು ಎಂದು ತಮಿಳುನಾಡು ಸರ್ಕಾರ ಬುಧವಾರ ತಿಳಿಸಿದೆ.

2018ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಜನರು ಹಬ್ಬದ ದಿನದಂದು(ಅಕ್ಟೋಬರ್ 31, 2024) ನಿಗದಿತ ಸಮಯದಲ್ಲಿ ಪಟಾಕಿಗಳನ್ನು ಸಿಡಿಸಬಹುದು ಮತ್ತು ಹಸಿರು ಪಟಾಕಿಗಳನ್ನು ಬಳಸಬೇಕು ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಆಸ್ಪತ್ರೆಗಳು ಸೇರಿದಂತೆ 'ನಿಶ್ಶಬ್ದ ಪ್ರದೇಶಗಳಲ್ಲಿ' ಪಟಾಕಿ ಸಿಡಿಸುವುದನ್ನು ತಪ್ಪಿಸಬೇಕು ಮತ್ತು ಸಾಮಾನ್ಯ 2 ಗಂಟೆಗಳ ನಿಯಮಕ್ಕೆ ಅಂಟಿಕೊಳ್ಳಿ ಎಂದು ರಾಜ್ಯ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ಅಲ್ಲದೆ, ಗುಡಿಸಲುಗಳು ಮತ್ತು ಸುಲಭವಾಗಿ ಬೆಂಕಿ ಹೊತ್ತಿಕೊಳ್ಳಬಹುದಾದ ಇತರ ಸ್ಥಳಗಳ ಬಳಿ ಪಟಾಕಿಗಳನ್ನು ಸಿಡಿಸಬಾರದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

"ದೀಪಾವಳಿಯನ್ನು ಶಬ್ದ ಮತ್ತು ಹೊಗೆ ಸೂಸುವ ಪಟಾಕಿಗಳನ್ನು ಸಿಡಿಸುವುದಕ್ಕಿಂತ ಪರಿಸರ ಸ್ನೇಹಿಯಾಗಿ ಬೆಳಕಿನ ಹಬ್ಬವಾಗಿ ಆಚರಿಸೋಣ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT