ತೆಲಂಗಾಣದಲ್ಲಿ ವರುಣನ ಆರ್ಭಟ 
ದೇಶ

ತೆಲಂಗಾಣದಲ್ಲಿ ವರುಣನ ಆರ್ಭಟ: ರೈಲು ಸಂಚಾರ ವ್ಯತ್ಯಯ; ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದ ಪ್ರಮುಖ ನಗರ ವಿಜಯವಾಡ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಗಳಲ್ಲಿ ನೀರು ಹರಿದು ಜನ ಸಂಚಾರವೂ ಕಷ್ಟವಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಮಳೆಗೆ 8 ಮಂದಿ ಬಲಿಯಾಗಿದ್ದಾರೆ.

ಹೈದರಾಬಾದ್: ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಿಂದ ತೀವ್ರ ಪ್ರವಾಹ ಉಂಟಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನೆರೆಯ ತೆಲಂಗಾಣದಲ್ಲಿ ಸನ್ನದ್ಧ ಸ್ಥಿತಿಯನ್ನು ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಆಂಧ್ರಪ್ರದೇಶದ ಪ್ರಮುಖ ನಗರ ವಿಜಯವಾಡ ಸಂಪೂರ್ಣ ಜಲಾವೃತಗೊಂಡಿದೆ. ರಸ್ತೆಗಳಲ್ಲಿ ನೀರು ಹರಿದು ಜನ ಸಂಚಾರವೂ ಕಷ್ಟವಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಮಳೆಗೆ 8 ಮಂದಿ ಬಲಿಯಾಗಿದ್ದಾರೆ. ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಗುಂಟೂರು ಮತ್ತು ವಿಜಯವಾಡದಲ್ಲಿ ಮಳೆಯು ಭೂಕುಸಿತ ಮತ್ತು ಜಲಾವೃತವಾದ ರಸ್ತೆಗಳಿಗೆ ಕಾರಣವಾಯಿತು.

ಆಂಧ್ರ ಪ್ರದೇಶದಲ್ಲುಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಕನಿಷ್ಠ ಎಂಟು ಮಂದಿ ಮಳೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುರವಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕುರವಿ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳ ಕ್ಷಿಪ್ರ ಕ್ರಮದಿಂದಾಗಿ ಸುಮಾರು 20 ಕುಟುಂಬಗಳು, ಒಟ್ಟು 100 ಜನರನ್ನು ರಕ್ಷಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಪ್ರತಿಕೂಲ ಹವಾಮಾನದ ಕಾರಣಕ್ಕೆ ಶನಿವಾರದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ರದ್ದುಪಡಿಸಿದ್ದು, ಅವರು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಪ್ರತಿ ಜಿಲ್ಲೆಗಳಿಗೆ ರೂ. 3 ಕೋಟಿಯನ್ನು ಬಿಡುಗಡೆ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಶಾಂತಿಕುಮಾರಿ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಕಂದಾಯ, ಪೌರಾಡಳಿತ, ವಿದ್ಯುತ್, ಆರೋಗ್ಯ ಇಲಾಖೆಗಳ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರನ್ನು ಕೂಡಲೇ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಾಶಯಗಳ ಗೇಟ್‌ಗಳನ್ನು ತೆರೆಯುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತೆಲಂಗಾಣ ಸರ್ಕಾರವು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚಲು ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT