ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಅತ್ಯಾಚಾರ ಪ್ರಕರಣಗಳ ವಿಚಾರಣೆಯಲ್ಲಿ ನಿಧಾನಗತಿ: ನ್ಯಾಯಾಲಯಗಳ 'ವಿಚಾರಣೆ ಮುಂದೂಡುವ ಸಂಸ್ಕೃತಿ' ಕೊನೆಯಾಗಲಿ ಎಂದ Droupadi Murmu

'ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರಕುವಂತಾಗಲು ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯಿಂದ ದೂರ ಸರಿಯುವ ಪ್ರಯತ್ನ ಮಾಡಬೇಕಿದೆ...

ನವದೆಹಲಿ: ದೇಶದಲ್ಲಿನ ಅತ್ಯಾಚಾರ ಪ್ರಕರಣಗಳ ವಿಚಾರಣೆಯಲ್ಲಿನ ನಿಧಾನಗತಿ ಕುರಿತು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನ್ಯಾಯಾಲಯಗಳ 'ವಿಚಾರಣೆ ಮುಂದೂಡುವ ಸಂಸ್ಕೃತಿ' ಕೊನೆಯಾಗಲಿ ಎಂದು ಕರೆ ನೀಡಿದ್ದಾರೆ.

ಭಾನುವಾರ ಭಾರತ ಮಂಟಪದಲ್ಲಿ ನಡೆದ ಜಿಲ್ಲಾ ನ್ಯಾಯಾಂಗದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ದ್ರೌಪದಿ ಮುರ್ಮು ಅವರು, 'ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ದೊರಕುವಂತಾಗಲು ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯಿಂದ ದೂರ ಸರಿಯುವ ಪ್ರಯತ್ನ ಮಾಡಬೇಕಿದೆ.

ನ್ಯಾಯಾಲಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇರುವುದು ನಮ್ಮ ಮುಂದಿರುವ ದೊಡ್ಡ ಸವಾಲಾಗಿದೆ. ನ್ಯಾಯಾಲಯಗಳಲ್ಲಿ ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯನ್ನು ಬದಲಾಯಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕಾಗಿದೆ. ದೇಶದ ಎಲ್ಲಾ ನ್ಯಾಯಾಧೀಶರು ನ್ಯಾಯವನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಹೇಳಿದರು.

ನ್ಯಾಯಾಲಯದ ಪ್ರಕ್ರಿಯೆಗಳಿಂದ ಜನರಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ ಮುರ್ಮು, ಈ ವಿದ್ಯಮಾನವು "ಬ್ಲ್ಯಾಕ್ ಕೋಟ್ ಸಿಂಡ್ರೋಮ್" ಆಗಿದೆ. ಈ ಬಗ್ಗೆ ಅಧ್ಯಯನ ನಡೆಯಬೇಕಾಗಿದೆ. ನ್ಯಾಯಾಂಗದಲ್ಲಿ ಮಹಿಳಾ ಅಧಿಕಾರಿಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು.

ಬಾಕಿ ಪ್ರಕರಣಗಳನ್ನು ತೆರವುಗೊಳಿಸಲು ವಿಶೇಷ ಲೋಕ ಅದಾಲತ್ ಸಪ್ತಾಹದಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕು. ಎಲ್ಲಾ ಪಾಲುದಾರರು ಈ ಸಮಸ್ಯೆಗೆ ಆದ್ಯತೆ ನೀಡುವ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು. ಕೆಲವು ಸಂದರ್ಭಗಳಲ್ಲಿ, ಸಂಪನ್ಮೂಲ ಹೊಂದಿರುವ ಜನರು ಅಪರಾಧಗಳನ್ನು ಮಾಡಿದ ನಂತರವೂ ನಿರ್ಭಯವಾಗಿ ಮತ್ತು ಮುಕ್ತವಾಗಿ ತಿರುಗಾಡುತ್ತಾರೆ" ಎಂದು ಮುರ್ಮು ವಿಷಾದಿಸಿದರು. ಅಲ್ಲದೆ ತಮ್ಮ ಅಪರಾಧಗಳಿಂದ ಬಳಲುತ್ತಿರುವ ಸಂತ್ರಸ್ಥರು ಯಾವುದೋ ಅಪರಾಧ ಮಾಡಿದಂತೆ ಭಯದಿಂದ ಬದುಕುತ್ತಾರೆ. ಹಳ್ಳಿಗಳ ಬಡವರು ನ್ಯಾಯಾಲಯಕ್ಕೆ ಹೋಗಲು ಭಯಪಡುತ್ತಾರೆ. ಅವರು ಬಲವಂತದ ಮೇರೆಗೆ ಮಾತ್ರ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಆಗಾಗ್ಗೆ ಅವರು ಅನ್ಯಾಯವನ್ನು ಮೌನವಾಗಿ ಸಹಿಸಿಕೊಳ್ಳುತ್ತಾರೆ. ಏಕೆಂದರೆ ನ್ಯಾಯಕ್ಕಾಗಿ ಹೋರಾಡುವುದು ತಮ್ಮ ಜೀವನವನ್ನು ಹೆಚ್ಚು ಶೋಚನೀಯಗೊಳಿಸಬಹುದು" ಎಂದು ಹೇಳಿದರು.

ಅವರಿಗೆ ಹಳ್ಳಿಯಿಂದ ಒಮ್ಮೆಯಾದರೂ ನ್ಯಾಯಾಲಯಕ್ಕೆ ಹೋಗುವುದು ಮಾನಸಿಕ ಮತ್ತು ಆರ್ಥಿಕ ಒತ್ತಡಕ್ಕೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಮುಂದೂಡುವ ಸಂಸ್ಕೃತಿಯಿಂದ ಬಡ ಜನರು ಅನುಭವಿಸುವ ನೋವನ್ನು ಅನೇಕ ಜನರು ಊಹಿಸಲೂ ಸಾಧ್ಯವಿಲ್ಲ, ಈ ಪರಿಸ್ಥಿತಿಯನ್ನು ಬದಲಾಯಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಭಾಗಿಯಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್ ಮಾತನಾಡಿ, ನ್ಯಾಯದ ಅನ್ವೇಷಣೆಯು ನಿರಂತರ ಪ್ರಯಾಣವಾಗಿದೆ ಮತ್ತು ಇದಕ್ಕೆ ಸಾಮೂಹಿಕ ಸಮರ್ಪಣೆ ಮತ್ತು ಅವಿರತ ಬದ್ಧತೆಯ ಅಗತ್ಯವಿದೆ. ದೇಶದ ಅತ್ಯಂತ ದೂರದ ಭಾಗಗಳಲ್ಲಿನ ಜನರಿಗೂ ನ್ಯಾಯ ಒದಗಿಸುವ ಧ್ಯೇಯದಲ್ಲಿ ಸುಪ್ರೀಂ ಕೋರ್ಟ್ ಆರಂಭದಿಂದಲೂ ದೃಢನಿಶ್ಚಯ ಹೊಂದಿದೆ.

ನ್ಯಾಯದ ಅನ್ವೇಷಣೆಯು ನಿರಂತರ ಪ್ರಯಾಣವಾಗಿದೆ, ಇದಕ್ಕೆ ಸಾಮೂಹಿಕ ಸಮರ್ಪಣೆ ಮತ್ತು ಅವಿರತ ಬದ್ಧತೆಯ ಅಗತ್ಯವಿದೆ. ಈ ಸಮ್ಮೇಳನದಲ್ಲಿ ವಿನಿಮಯವಾದ ಚರ್ಚೆಗಳು ಮತ್ತು ಆಲೋಚನೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿವೆ ಮತ್ತು ನ್ಯಾಯವು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ನಮಗೆ ಮತ್ತಷ್ಟು ಸ್ಫೂರ್ತಿ ನೀಡಲಿದೆ ಎಂದು ನನಗೆ ವಿಶ್ವಾಸವಿದೆ" ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಸುಪ್ರೀಂ ಕೋರ್ಟ್ ನ 75ನೇ ವಾರ್ಷಿಕೋತ್ಸವದ ನೆನಪಿಗಾಗಿ ಆಯೋಜಿಸಲಾದ ರಾಷ್ಟ್ರವ್ಯಾಪಿ ಸಮ್ಮೇಳನಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ಇಂಥ ಸಮ್ಮೇಳನಗಳು ನ್ಯಾಯಾಂಗ ಅಧಿಕಾರಿಗಳಿಗೆ ಕಲಿಯಲು, ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಮತ್ತು ತಳಮಟ್ಟದಲ್ಲಿ ಒತ್ತಡದ ಸಮಸ್ಯೆಗಳನ್ನು ಪರಿಹರಿಸಲು ವೇದಿಕೆಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದರು.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಕೇಂದ್ರ ಕಾನೂನು ಮತ್ತು ನ್ಯಾಯ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್​ನ ಧ್ವಜ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT