ಸಾಂದರ್ಭಿಕ ಚಿತ್ರ 
ದೇಶ

ಅಮೃತಸರ: ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ, 7 ಜನರಿಗೆ ಗಾಯ

ಸ್ಫೋಟದಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮನೆ ಇದ್ದ ಕಟ್ಟಡದ ಗೋಡೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳು ಅಮೃತಸರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಅಮೃತಸರ: ಇಲ್ಲಿಗೆ ಸಮೀಪದ ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 7 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಅಮೃತಸರ ನಗರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಜಂಡಿಯಾಲ ಪಟ್ಟಣದ ನಾಗಲ್ ಗುರು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.

ಮನೆಯಲ್ಲಿ ಪಟಾಕಿ ತಯಾರಿಕೆಗೆ ಬಳಸುವ ಅಪಾರ ಪ್ರಮಾಣದ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಇವುಗಳಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ.

ಸ್ಫೋಟದಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮನೆ ಇದ್ದ ಕಟ್ಟಡದ ಗೋಡೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳು ಅಮೃತಸರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತನ್ನ ಮನೆಯಲ್ಲಿ ಅಕ್ರಮ ಪಟಾಕಿ ಘಟಕ ನಡೆಸುತ್ತಿರುವ ಬಗ್ಗೆ ನನಗೆ ತಿಳಿದಿರಲಿಲ್ಲ ಮತ್ತು ಸ್ಫೋಟದ ನಂತರವೇ ಈ ಬಗ್ಗೆ ತಿಳಿದು ಬಂದಿದೆ ಎಂದು ಮನೆಯ ಮಾಲೀಕರು ಹೇಳಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!