ಮಣಿಪುರದಲ್ಲಿನ ಹಿಂಸಾಚಾರ (ಸಂಗ್ರಹ ಚಿತ್ರ) online desk
ದೇಶ

ಮಣಿಪುರದಲ್ಲಿ ಹಿಂಸಾಚಾರ: ಡ್ರೋನ್ ದಾಳಿಯಲ್ಲಿ ಮಹಿಳೆಯರು ಸೇರಿ ಮೂವರಿಗೆ ಗಾಯ!

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಡ್ರೋನ್ ಬಳಸಿ ಹೊಸ ಬಾಂಬ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಡ್ರೋನ್ ದಾಳಿಯಲ್ಲಿ 23 ವರ್ಷದ ಮಹಿಳೆ ಸೇರಿ ಮೂವರಿಗೆ ಗಾಯಗಳಾಗಿವೆ.

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಡ್ರೋನ್ ಬಳಸಿ ಹೊಸ ಬಾಂಬ್ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

"ಸೋಮವಾರ ಸಂಜೆ 6. 20 ರ ವೇಳೆಗೆ ವಸತಿ ಪ್ರದೇಶದಲ್ಲಿ ಡ್ರೋನ್‌ನಿಂದ ಕನಿಷ್ಠ ಎರಡು ಸ್ಫೋಟಕಗಳನ್ನು ಚದುರಿಸಲಾಯಿತು. ಇದರಲ್ಲಿ ಮಹಿಳೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ" ಎಂದು ಅಧಿಕಾರಿಗಳು ಹೇಳಿದ್ದಾರೆ. ಮಹಿಳೆ ಸೆಂಜಮ್ ಚಿರಾಂಗ್ ಪ್ರದೇಶದ ತನ್ನ ನಿವಾಸದಲ್ಲಿದ್ದಾಗ ಬಾಂಬ್ ತನ್ನ ಮನೆಯ ಕಬ್ಬಿಣದ ಮೇಲ್ಛಾವಣಿಯ ಶೀಟ್‌ಗಳ ಮೂಲಕ ತೂರಿಕೊಂಡು ಸ್ಫೋಟಗೊಂಡಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಬೆಟ್ಟದ ಮೇಲಿನ ಪ್ರದೇಶಗಳಿಂದ ತಗ್ಗು ಪ್ರದೇಶದ ಸೆಜಮ್ ಚಿರಾಂಗ್ ಗ್ರಾಮದ ಮೇಲೆ ಉಗ್ರರು ಮನಬಂದಂತೆ ಗುಂಡು ಹಾರಿಸಿದ್ದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸ್ಥಳವು ಕೌಟ್ರುಕ್‌ನಿಂದ ಕೇವಲ 3 ಕಿಮೀ ದೂರದಲ್ಲಿದೆ, ಭಾನುವಾರದಂದು ಇದೇ ರೀತಿಯ ಡ್ರೋನ್ ಬಾಂಬ್ ಮತ್ತು ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದರು.

ಏತನ್ಮಧ್ಯೆ, ಮಣಿಪುರ ಪೊಲೀಸರ ಹೇಳಿಕೆಯ ಪ್ರಕಾರ, ಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯ ಸಮೀಪದ ಖರಂ ವೈಫೇಯ್ ಗ್ರಾಮದಿಂದ ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT