ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಸೇನಾ ಶಿಬಿರದಲ್ಲಿ ಯೋಧ ನಿಗೂಢ ಸಾವು; ಉಗ್ರರ ದಾಳಿ ಶಂಕೆ

ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಯೋಧ ಪತ್ತೆಯಾಗಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ.

ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಿಗ್ಗೆ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಯೋಧ ಕಂಡು ಬಂದಿದ್ದಾರೆ. ಕೂಡಲೇ ಅವರನ್ನು ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಈ ನಡುವೆ ಉಗ್ರರ ದಾಳಿ ಕುರಿತು ಭಾರತೀಯ ಸೇನೆ ಶಂಕಿಸಿತ್ತು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಸೇನೆ ಹಾಗೂ ಪೊಲೀಸ್ ತಂಡದಿಂದ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಜೊತೆಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು ನಿಯೋಜಿಸಲಾಗಿದೆ.

ಉಗ್ರರು ಯೋಧನ ಹತ್ಯೆಗೆ ಸ್ನೈಪರ್‌ ಬಂದೂಕನ್ನು ಬಳಸಿದ್ದು, ನಂತರ ಘಟನಾ ಸ್ಥಳದಿಂದ ಪಲಾಯನ ಮಾಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ.

ದಿನವಿಡೀ ಶೋಧ ಕಾರ್ಯ ಮುಂದುವರೆದಿದ್ದು, ರಕ್ಷಣಾ ಮೂಲಗಳ ಪ್ರಕಾರ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ಯಾವುದೇ ಶಂಕಿತ ಉಗ್ರಗಾಮಿಗಳ ಚಲನವಲನಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT