ವಿಪಕ್ಷ ನಾಯಕ ರಾಹುಲ್ ಗಾಂಧಿ- ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ online desk
ದೇಶ

ಕಾಂಗ್ರೆಸ್ ಜತೆ ಮೈತ್ರಿ ಮಾತುಕತೆ ವಿಫಲ: ಹರಿಯಾಣದಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧೆ ಸಾಧ್ಯತೆ

ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಎಎಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಬಹುತೇಕ ವಿಫಲವಾಗಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಹರಿಯಾಣದಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.

"ಹರಿಯಾಣದಲ್ಲಿ ಮೈತ್ರಿ ಮಾತುಕತೆ ಪತನದ ಅಂಚಿನಲ್ಲಿದೆ ಮತ್ತು ಎಎಪಿ ರಾಜ್ಯದ 90 ವಿಧಾನಸಭಾ ಸ್ಥಾನಗಳಲ್ಲಿ 50 ಸ್ಥಾನಗಳಲ್ಲಿ ಸ್ವಂತವಾಗಿ ಸ್ಪರ್ಧಿಸಲು ಯೋಜಿಸುತ್ತಿದೆ" ಎಂದು ಎಎಪಿ ಮೂಲಗಳು ಹೇಳಿವೆ.

ಹರಿಯಾಣದಲ್ಲಿ ಎಎಪಿ 10 ವಿಧಾನಸಭಾ ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದರೆ, ಕಾಂಗ್ರೆಸ್ ಐದರಿಂದ ಏಳು ಸ್ಥಾನಗಳನ್ನು ನೀಡುತ್ತಿದೆ ಎಂದು ಪಕ್ಷದ ಒಳಗಿನವರು ಈ ಹಿಂದೆ ಹೇಳಿದ್ದರು. ಅಲ್ಲದೆ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಹರಿಯಾಣ, ಗುಜರಾತ್ ಮತ್ತು ದೆಹಲಿಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದವು.

ಹರಿಯಾಣದಲ್ಲಿ ಎಎಪಿಗೆ ಕುರುಕ್ಷೇತ್ರ ಲೋಕಸಭಾ ಸ್ಥಾನ ನೀಡಲಾಗಿತ್ತು. ಹರಿಯಾಣ ಎಎಪಿ ರಾಜ್ಯಾಧ್ಯಕ್ಷ ಸುಶೀಲ್ ಗುಪ್ತಾ ಅವರು ಕುರುಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ನವೀನ್ ಜಿಂದಾಲ್ ವಿರುದ್ಧ ಸೋತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT