ಆರ್ ಜಿ ಕರ್ ವೈದ್ಯಕೀಯ ಕಾಲೇಜು (ಸಂಗ್ರಹ ಚಿತ್ರ) 
ದೇಶ

Kolkata Rape and Murder: ಸಾಮೂಹಿಕ ಅತ್ಯಾಚಾರವಲ್ಲ- CBI ಸ್ಪಷ್ಟನೆ

ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳವು ವೈದ್ಯೆಯ ಸಾವಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ತಳ್ಳಿಹಾಕಿದೆ. ಲಭ್ಯವಿರುವ ಪುರಾವೆಗಳ ಆಧಾರದಲ್ಲಿ ಸಂಜಯ್ ರಾಯ್ ನನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನಡೆದಿದೆ ಎಂದು ಹೇಳಲಾದ ಸಾಮೂಹಿಕ ಅತ್ಯಾಚಾರ ಆರೋಪವನ್ನು CBI ತಳ್ಳಿ ಹಾಕಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳವು ವೈದ್ಯೆಯ ಸಾವಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ತಳ್ಳಿಹಾಕಿದೆ.

ಲಭ್ಯವಿರುವ ಪುರಾವೆಗಳ ಆಧಾರದಲ್ಲಿ ಸಂಜಯ್ ರಾಯ್ ನನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆತ ಮಾತ್ರ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂದು CBI ಮೂಲಗಳು ತಿಳಿಸಿವೆ.

ಈ ಪ್ರಕರಣದ ತನಿಖೆಯು “ಅಂತಿಮ ಹಂತ”ದಲ್ಲಿದೆ ಎಂದು ಮೂಲಗಳು ತಿಳಿಸಿದ್ದು, ಶೀಘ್ರದಲ್ಲೇ ತಮ್ಮ ವರದಿ ಮತ್ತು ಚಾರ್ಜ್ ಶೀಟ್ ದಾಖಲಿಸಲು ಸಿಬಿಐ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಅಂದಹಾಗೆ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ CBIಗೆ ವಹಿಸಿತ್ತು. ಅಲ್ಲದೆ ಪ್ರಕರಣದಲ್ಲಿನ ತನಿಖಾ ವಿಳಂಬದ ಕುರಿತು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ