ಕಮಲಾ ಮಿಲ್ ಕಾಂಪೌಂಡ್‌ನಲ್ಲಿರುವ ಟೈಮ್ಸ್ ಟವರ್ ಕಟ್ಟಡದಲ್ಲಿ ಬೆಂಕಿ ನಂತರ ಹೊಗೆ ಮತ್ತು ಜ್ವಾಲೆ ಕಾಣಿಸಿಕೊಂಡಿರುವುದು.  
ದೇಶ

ಮುಂಬೈ: 14 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ; Video

ಮುಂಬೈಯ ಲೋವರ್ ಪರೇಲ್ ಪ್ರದೇಶದ ಕಮಲಾ ಮಿಲ್ಸ್ ಕಾಂಪೌಂಡ್‌ನಲ್ಲಿರುವ ಟೈಮ್ಸ್ ಟವರ್ ಕಟ್ಟಡದಲ್ಲಿ ಇಂದು ಬೆಳಗ್ಗೆ 6.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈಯ 14 ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಎರಡು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.

ಮುಂಬೈಯ ಲೋವರ್ ಪರೇಲ್ ಪ್ರದೇಶದ ಕಮಲಾ ಮಿಲ್ಸ್ ಕಾಂಪೌಂಡ್‌ನಲ್ಲಿರುವ ಟೈಮ್ಸ್ ಟವರ್ ಕಟ್ಟಡದಲ್ಲಿ ಇಂದು ಬೆಳಗ್ಗೆ 6. 30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿಯು 3 ಮತ್ತು 7 ನೇ ಮಹಡಿಗಳ ನಡುವೆ ಬೆಂಕಿ ಹೊತ್ತಿ ಉರಿಯಿತು. ಅಗ್ನಿಶಾಮಕ ದಳದವರು ಉಳಿ ಮತ್ತು ಸುತ್ತಿಗೆ ಬಳಸಿ ಬಾಗಿಲುಗಳ ಬೀಗಗಳನ್ನು ಮುರಿದು ಬೆಂಕಿಯನ್ನು ನಂದಿಸಲು ಕಟ್ಟಡವನ್ನು ಪ್ರವೇಶಿಸಿದರು ಎಂದು ತಿಳಿಸಿದರು. ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿ ಬೆಂಕಿ ನಂದಿಸಲು ಹರಸಾಹಸಪಡಬೇಕಾಯಿತು.

ಕಮಲಾ ಮಿಲ್ಸ್ ಕಾಂಪೌಂಡ್ ಈ ಹಿಂದೆ ಅನೇಕ ಪ್ರಮುಖ ಬೆಂಕಿ ಅನಾಹುತಗಳಿಗೆ ಸಾಕ್ಷಿಯಾಗಿದೆ, ಪಾರ್ಕ್‌ಸೈಡ್ ವಸತಿ ಕಟ್ಟಡದ ಪಕ್ಕದಲ್ಲಿದೆ. ಅಕ್ಕಪಕ್ಕದ ನಿವಾಸಿಗಳು ಬೆಂಕಿ ಜ್ವಾಲೆ ಮತ್ತು ಹೊಗೆ ಕಂಡು ಹೌಹಾರಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವ ಮೊದಲು ಭದ್ರತಾ ಸಿಬ್ಬಂದಿ ತಮ್ಮ ಕಟ್ಟಡದ ಅಗ್ನಿಶಾಮಕ ಸಾಧನಗಳೊಂದಿಗೆ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.

ಗ್ಲಾಸ್ ಒಡೆದಿರುವುದು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT