ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು. 
ದೇಶ

ಲಖನೌ ಬಹುಮಹಡಿ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳದಲ್ಲಿ ಇನ್ನೂ ಐವರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಕಟ್ಟಡದ ಬಳಿ ನಿಂತಿದ್ದ ಟ್ರಕ್‌ಗೂ ಹಾನಿಯಾಗಿದೆ. ಕಟ್ಟಡ ಕುಸಿದು ಬಿದ್ದಿದ್ದರಿಂದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿತ್ತು. ಸದ್ಯ ಪೊಲೀಸ್ ತಂಡ ಹಾಗೂ ಇತರೆ ರಕ್ಷಣಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು ಕಟ್ಟಡದ ಅವಶೇಷಗಳನ್ನು ತೆಗೆಯುವಲ್ಲಿ ನಿರತರಾಗಿದ್ದಾರೆ.

ಮುಖ್ಯಮಂತ್ರಿಗಳು ಸ್ಥಳದ ಪರಿಸ್ಥಿತಿ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ ಎಂದು ಎಡಿಜಿ ಅಮಿತಾಬ್ ಯಶ್ ಅವರು ಮಾಹಿತಿ ನೀಡಿದ್ದಾರೆ.

ಶನಿವಾರ ಸಂಜೆ ಐದು ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ. ಮೂರನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಹೀಗಾಗಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ಮ್ಯಾಜಿಸ್ಟ್ರೇಟ್ ಜೊತೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಕರೆ ಮಾಡಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಾಗುವ ಎಲ್ಲಾ ಸಹಾಯವನ್ನು ಮಾಡುತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!