ನಟ ವಿಜಯ್ 
ದೇಶ

ನಟ ವಿಜಯ್ ರ TVK ಪಕ್ಷಕ್ಕೆ ಚುನಾವಣಾ ಆಯೋಗ ಮಾನ್ಯತೆ

'ನಾವು ಫೆಬ್ರವರಿ 2 ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ನಮ್ಮ ಭಾರತೀಯ ಚುನಾವಣಾ ಆಯೋಗವು ನಮ್ಮ ತಮಿಳಗ ವೆಟ್ರಿ ಕಳಗಂಗೆ ಮಾನ್ಯತೆ ನೀಡಿದೆ'.

ನವದೆಹಲಿ: ಖ್ಯಾತ ತಮಿಳು ನಟ ದಳಪತಿ ವಿಜಯ್ ಆರಂಭಿಸಿರುವ ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ'(Tamilaga Vettri Kazhagam)ಗೆ ಕೇಂದ್ರ ಚುನಾವಣಾ ಆಯೋಗವು ಮಾನ್ಯತೆ ನೀಡಿದೆ.

ಈ ಬಗ್ಗೆ ಸ್ವತಃ ನಟ ವಿಜಯ್ ಮಾಹಿತಿ ನೀಡಿದ್ದು, 'ನಾವು ಫೆಬ್ರವರಿ 2 ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ನಮ್ಮ ಭಾರತೀಯ ಚುನಾವಣಾ ಆಯೋಗವು ನಮ್ಮ ತಮಿಳಗ ವೆಟ್ರಿ ಕಳಗಂಗೆ ಮಾನ್ಯತೆ ನೀಡಿದೆ. ಅಲ್ಲದೆ ಚುನಾವಣೆಯಲ್ಲಿ ಭಾಗವಹಿಸಲು ಅನುಮತಿ ನೀಡಿದೆ' ಎಂದು ಹೇಳಿದ್ದಾರೆ.

ಎರಡು ವಾರಗಳ ಹಿಂದೆ ವಿಜಯ್ ಟಿವಿಕೆ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ್ದರು. ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಪಕ್ಷದ ಗುರಿಯಾಗಿದೆ ಎಂದು ಟಿವಿಕೆ ಪಕ್ಷದ ಮುಖಂಡರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!