ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ: ಅಲ್ಯೂಮಿನಾ ರಿಫೈನರಿಯಲ್ಲಿ ದುರ್ಘಟನೆ, ನಾಲ್ವರು ಕಾರ್ಮಿಕರ ಸಾವು, ಒಬ್ಬರು ಗಾಯ

ಕಲ್ಲಿದ್ದಲು ತುಂಬಿದ 'ಹಾಪರ್' ಕುಸಿದು ಅದರ ಕೆಳಗೆ ಕೆಲಸ ಮಾಡುತ್ತಿದ್ದ ಹತ್ತು ಜನರ ಮೇಲೆ ಬಿದ್ದಿದೆ. ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ಅಂಬಿಕಾಪುರ: ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ಅಲ್ಯುಮಿನಾ ರಿಫೈನರಿಯಲ್ಲಿ (ಸಂಸ್ಕರಣಾ ಘಟಕ) ಭಾನುವಾರ ಕಲ್ಲಿದ್ದಲು ತುಂಬಿದ 'ಹಾಪರ್' ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಘುನಾಥಪುರ ಪೊಲೀಸ್ ಚೌಕಿ ವ್ಯಾಪ್ತಿಯ ಸಿಲ್ಸಿಲಾ ಗ್ರಾಮದ ಮಾ ಕುದರ್‌ಗರ್ಹಿ ಅಲ್ಯುಮಿನಾ ರಿಫೈನರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಲ್ಲಿದ್ದಲು ತುಂಬಿದ 'ಹಾಪರ್' ಕುಸಿದು ಅದರ ಕೆಳಗೆ ಕೆಲಸ ಮಾಡುತ್ತಿದ್ದ ಹತ್ತು ಜನರ ಮೇಲೆ ಬಿದ್ದಿದೆ. ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದೆ ಎಂದು ಅವರು ಹೇಳಿದರು.

ನಾಲ್ವರು ಕಾರ್ಮಿಕರ ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಗಿದ್ದು, ಓರ್ವ ಕಾರ್ಮಿಕ ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಐವರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

ಮೃತರನ್ನು ಮಧ್ಯಪ್ರದೇಶದ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್