ಸಾಂದರ್ಭಿಕ ಚಿತ್ರ 
ದೇಶ

ಭಾರತದಲ್ಲಿ ಮೊದಲ ಶಂಕಿತ 'ಮಂಕಿಪಾಕ್ಸ್ ' ಪ್ರಕರಣ: ಆತಂಕ ಪಡುವ ಅಗತ್ಯವಿಲ್ಲ- ಕೇಂದ್ರ ಆರೋಗ್ಯ ಸಚಿವಾಲಯ

ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ

ನವದೆಹಲಿ: ಇತ್ತೀಚಿಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೋರ್ವನಿಗೆ 'ಮಂಕಿಪಾಕ್ಸ್ ' ತಗುಲಿರುವುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆತನ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.

ಮಂಕಿಪಾಕ್ಸ್ ಇದೆಯೇ ಎಂಬುದನ್ನು ತಿಳಿಯಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ ಮತ್ತು ಮಂಕಿಪಾಕ್ಸ್ ಮೂಲ ತಿಳಿಯಲು ಹಾಗೂ ದೇಶದೊಳಗೆ ಅದರ ಪರಿಣಾಮವನ್ನು ನಿರ್ಣಯಿಸಲು ಸಂಪರ್ಕ ಪತ್ತೆ ಹಚ್ಚುವಿಕೆ ಕಾರ್ಯ ನಡೆಯುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಯಾಣ-ಸಂಬಂಧಿತ ಪ್ರಕರಣಗಳನ್ನು ಎದುರಿಸಲು ದೇಶವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಯಾವುದೇ ಸಂಭಾವ್ಯ ಅಪಾಯವನ್ನು ನಿರ್ವಹಿಸಲು ಮತ್ತು ತಗ್ಗಿಸಲು ದೃಢವಾದ ಕ್ರಮಗಳನ್ನು ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!