ಜವಾಹರ್ ಸಿರ್ಕಾರ್ 
ದೇಶ

ಟಿಎಂಸಿ ಸಂಸದ ಜವಾಹರ್ ಸಿರ್ಕಾರ್ ರಾಜ್ಯಸಭೆಗೆ ರಾಜೀನಾಮೆ: ಸಕ್ರಿಯ ರಾಜಕೀಯ ತೊರೆಯುವುದಾಗಿ ಮಮತಾಗೆ ಪತ್ರ

ಒಂದು ತಿಂಗಳಿನಿಂದ ವಿವಾದದ ಬಿಂದುವಾಗಿರುವ ಆರ್‌ಜಿ ಕರ್ ಆಸ್ಪತ್ರೆ ಘಟನೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸಂಸದರು ಬೇಸರ ವ್ಯಕ್ತಪಡಿಸಿದರು.

ಕೋಲ್ಕತ್ತಾ: ಆರ್​ಜಿ ಕರ್​ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಮತ್ತು ಅದರ ಹಿನ್ನೆಲೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ತಮ್ಮದೇ ಟಿಎಂಸಿ ಸರ್ಕಾರದ ವಿರುದ್ಧ ಹಿರಿಯ ಸಂಸದ ತಿರುಗಿಬಿದ್ದು, ರಾಜೀನಾಮೆ ನೀಡಿದ್ದಾರೆ. ಪ್ರಕರಣವನ್ನು ಬಂಗಾಳ ಸರ್ಕಾರ ನಿರ್ವಹಿಸಿದ ಕ್ರಮವನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಭಾನುವಾರ ತಮ್ಮ ಸಂಸದೀಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಎಂಸಿ ನಾಯಕ ಜವಾಹರ್ ಸಿರ್ಕಾರ್ ಭಾನುವಾರ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ರಾಜ್ಯಸಭೆಗೆ ರಾಜೀನಾಮೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಹಲವಾರು ತಿಂಗಳುಗಳಿಂದ ಬ್ಯಾನರ್ಜಿಯವರೊಂದಿಗೆ ಖಾಸಗಿಯಾಗಿ ಮಾತನಾಡಲು ಸಾಧ್ಯವಾಗದಿದ್ದಕ್ಕಾಗಿ ಅವರು ನಿರಾಶೆ ವ್ಯಕ್ತಪಡಿಸಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಾಗೂ ಸಮಸ್ಯೆ ಬಗೆಹರಿಸುವಲ್ಲಿ ಪಕ್ಷ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿಯೂ ಆಗಿರುವ ಸಂಸದರು, ರಾಜ್ಯದ ಕಾಳಜಿಯನ್ನು ಪ್ರತಿನಿಧಿಸಲು ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ ಆದರೆ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳದಿರುವ ಬಗ್ಗೆ ತಮ್ಮ ಹತಾಶೆ ವ್ಯಕ್ತ ಪಡಿಸಿದ್ದಾರೆ. ಆಡಳಿತಾರೂಢ ಬಿಜೆಪಿ ಮತ್ತು ಅದರ ನಾಯಕತ್ವದ "ನಿರಂಕುಶ ಮತ್ತು ಕೋಮುವಾದಿ ರಾಜಕಾರಣವನ್ನು ಎದುರಿಸಲು ರಾಜಕೀಯಕ್ಕೆ ಪ್ರವೇಶಿಸಲು ತನಗೆ ಪ್ರೇರಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ನಾನು ಶೀಘ್ರದಲ್ಲೇ ಸಂಸತ್ತಿನ ಮೇಲ್ಮನೆ ಸದಸ್ಯತ್ವದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿದರು. “ನಾನು ಸಂಸತ್ತಿಗೆ ಮತ್ತು ರಾಜಕೀಯದಿಂದ ಸಂಪೂರ್ಣವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ನಾನು ನಿಮಗೆ ತಿಳಿಸಬೇಕು” ಎಂದು ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವು ಭ್ರಷ್ಟಾಚಾರದ ಬಗ್ಗೆ ಮತ್ತು ನಾಯಕರ ತಂತ್ರಗಳ ಬಗ್ಗೆ ಸಾಕಷ್ಟು ಕಾಳಜಿ ವಹಿಸದ ಕಾರಣ ನಾನು ಭ್ರಮನಿರಸನಗೊಂಡಿದ್ದೇನೆ ಎಂದು ಅವರು ಬರೆದಿದ್ದಾರೆ. “ಭ್ರಷ್ಟ ಅಧಿಕಾರಿಗಳು (ಅಥವಾ ವೈದ್ಯರು) ಪ್ರಧಾನ ಮತ್ತು ಉನ್ನತ ಹುದ್ದೆಗಳನ್ನು ಪಡೆಯುವಂತಹ ಕೆಲವು ವಿಷಯಗಳನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಸಿರ್ಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದು ತಿಂಗಳಿನಿಂದ ವಿವಾದದ ಬಿಂದುವಾಗಿರುವ ಆರ್‌ಜಿ ಕರ್ ಆಸ್ಪತ್ರೆ ಘಟನೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸಂಸದರು ಬೇಸರ ವ್ಯಕ್ತಪಡಿಸಿದರು. ಅವರು ಮಮತಾ ಬ್ಯಾನರ್ಜಿಯವರ ಹಿಂದಿನ ಕ್ರಮಗಳಂತೆಯೇ ಕ್ಷಿಪ್ರ ಹಸ್ತಕ್ಷೇಪವನ್ನು ನಿರೀಕ್ಷಿಸಿದ್ದರು, ಆದರೆ ಸರ್ಕಾರ ಸಕಾಲದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT