ದೆಹಲಿ ಸಚಿವೆ ಅತಿಶಿ 
ದೇಶ

ದೆಹಲಿ ಸರ್ಕಾರ ಬೀಳಿಸಿ, ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಸಂಚು: ಎಎಪಿ

ದೆಹಲಿಯು ಸಾಂವಿಧಾನಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿ ಎಂದು ಪ್ರತಿಪಕ್ಷ ಬಿಜೆಪಿ, ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.

ನವದೆಹಲಿ: ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರವನ್ನು ಬೀಳಿಸಿ, ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಹಿಂಬಾಗಿಲಿನಿಂದ ಸರ್ಕಾರ ನಡೆಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಎಎಪಿಯ ಹಿರಿಯ ನಾಯಕಿ ಮತ್ತು ಸಚಿವೆ ಅತಿಶಿ ಅವರು ಮಂಗಳವಾರ ಆರೋಪಿಸಿದ್ದಾರೆ.

ದೆಹಲಿಯು ಸಾಂವಿಧಾನಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿ ಎಂದು ಪ್ರತಿಪಕ್ಷ ಬಿಜೆಪಿ, ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ಎಎಪಿ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ಧಾರೆ.

ಪಿಟಿಐ ಜೊತೆ ಮಾತನಾಡಿದ ಅತಿಶಿ, ಕೇಜ್ರಿವಾಲ್ ಸರ್ಕಾರ ಉರುಳಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶೂನ್ಯ ಸ್ಥಾನ ನೀಡುವ ಮೂಲಕ ದೆಹಲಿಗರು ತಕ್ಕ ಉತ್ತರ ನೀಡಲಿದ್ದಾರೆ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ) ಎಲ್ಲಾ 70 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.

ಮಹಾರಾಷ್ಟ್ರ, ಕರ್ನಾಟಕ ಮತ್ತು ಮಣಿಪುರದಲ್ಲಿ ನಡೆದಂತೆ ಆಪರೇಷನ್ ಕಮಲದ ಮೂಲಕ ದೇಶದಲ್ಲಿ ಚುನಾಯಿತ ಸರ್ಕಾರಗಳನ್ನು ಉರುಳಿಸುವುದು ಬಿಜೆಪಿಯ ಏಕೈಕ ಕೆಲಸವಾಗಿದೆ ಎಂದು ಅತಿಶಿ ತಿರುಗೇಟು ನೀಡಿದ್ದಾರೆ.

ದೆಹಲಿಯಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂಬ ಆರೋಪದ ಮೇಲೆ ಎಎಪಿ ಸರ್ಕಾರವನ್ನು ವಜಾಗೊಳಿಸುವಂತೆ ಕೋರಿ ಬಿಜೆಪಿ ಶಾಸಕರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ಪತ್ರವನ್ನು ಎಂಎಚ್‌ಎಗೆ ರವಾನಿಸಲಾಗಿದೆ ಎಂದು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಸೋಮವಾರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!