ಕಿರಿಯ ವೈದ್ಯರ ಪ್ರತಿಭಟನೆ  
ದೇಶ

ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ: ಪ್ರತಿಭಟನೆ ಮುಂದುವರಿಸಿದ ಕಿರಿಯ ವೈದ್ಯರು; ಸ್ವಾಸ್ಥ್ಯ ಭವನದ ಮುಂದೆ ಧರಣಿ

ಮಂಗಳವಾರ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿತ್ತು.

ಕೋಲ್ಕತ್ತಾ: ಸೆಪ್ಟೆಂಬರ್ 10 ರಂದು ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನವನ್ನು ಧಿಕ್ಕರಿಸಿ ಧರಣಿ ನಡೆಸುತ್ತಿರುವ ಕಿರಿಯ ವೈದ್ಯರ ಪ್ರತಿಭಟನೆ ಬುಧವಾರ 33ನೇ ದಿನಕ್ಕೆ ಕಾಲಿಟ್ಟಿದೆ.

ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಕೋಲ್ಕತ್ತಾ ಪೊಲೀಸ್ ಆಯುಕ್ತರು, ಆರೋಗ್ಯ ಕಾರ್ಯದರ್ಶಿ, ಆರೋಗ್ಯ ಸೇವೆಗಳ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ತೆಗೆದುಹಾಕುವಂತೆ ಒತ್ತಾಯಿಸಿ ಕಿರಿಯ ವೈದ್ಯರು ಇಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಛೇರಿ ಸ್ವಾಸ್ಥ್ಯ ಭವನದ ಹೊರಗೆ ಧರಣಿ ಮುಂದುವರೆಸಿದ್ದಾರೆ.

ಮಂಗಳವಾರ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾನಿರತ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿತ್ತು ಮತ್ತು ಕೆಲಸ ಪುನರಾರಂಭಿಸಿದ ನಂತರ ಅವರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿತ್ತು.

ಪ್ರತಿಭಟನಾನಿರತ ವೈದ್ಯರ ವಿರುದ್ಧ ಶಿಕ್ಷಾರ್ಹ ವರ್ಗಾವಣೆ ಸೇರಿದಂತೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಭರವಸೆ ನೀಡಿದ ನಂತರ ನ್ಯಾಯಾಲಯವು ಈ ನಿರ್ದೇಶನ ನೀಡಿತ್ತು. ಆದರೆ ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ನಾವು ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ನಿನ್ನೆ ಪ್ರತಿಭಟನಾನಿರತ ವೈದ್ಯರು ಹೇಳಿದ್ದರು.

ನಂತರ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯ ಸರ್ಕಾರ, ಕಿರಿಯ ವೈದ್ಯರನ್ನು ಮಾತುಕತೆಗೆ ಆಹ್ವಾನಿಸಿತ್ತು. ರಾಜ್ಯ ಸಚಿವಾಲಯ 'ನಬಣ್ಣ'ದಲ್ಲಿ ಸಭೆಗೆ ಆಹ್ವಾನಸಲಾಗಿತ್ತು.

ರಾಜ್ಯ ಆರೋಗ್ಯ ಕಾರ್ಯದರ್ಶಿಯವರಿಂದ ಸಭೆಗೆ ಬರುವಂತೆ ನಮಗೆ ಮೇಲ್ ಬಂದಿದೆ. ಆದರೆ ನಾವು ರಾಜೀನಾಮೆ ಕೇಳುತ್ತಿರುವವರಿಂದಲೇ ನಮಗೆ ಮೇಲ್ ಬಂದಿರುವುದು "ಅವಮಾನಕರ" ಎಂದು ಪ್ರತಿಭಟನಾನಿರತ ವೈದ್ಯರು ಟೀಕಿಸಿದ್ದಾರೆ.

ಸಭೆಗೆ ಹಾಜರಾಗಲು ಪ್ರತಿನಿಧಿಗಳ ಸಂಖ್ಯೆಯನ್ನು 10ಕ್ಕೆ ಸೀಮಿತಗೊಳಿಸಿರುವುದು ಸಹ "ಅವಮಾನಕರ" ಎಂದು ಅವರು ಹೇಳಿದ್ದಾರೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ವೈದ್ಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿತ್ತು. ವೈದ್ಯೆಯ ಶವ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಕಿರಿಯ ವೈದ್ಯರು ಆಗಸ್ಟ್ 9 ರಂದು ತಮ್ಮ ಪ್ರತಿಭಟನೆ ಪ್ರಾರಂಭಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT