ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನ, ಡಾಕ್ಟರ್ ಖಾಸಗಿ ಅಂಗವನ್ನು ಬ್ಲೇಡ್‌ನಿಂದ ಗಾಯಗೊಳಿಸಿದ ಮಹಿಳೆ!

ಖಾಸಗಿ ಅಂಗವನ್ನು ಗಾಯಗೊಳಿಸಿ ನಂತರ ಅಲ್ಲಿಂದ ಓಡಿ ಹೋಗಿದ್ದು, ತದನಂತರ ಆಸ್ಪತ್ರೆಯ ಹೊರಗಿನಿಂದ ಘಟನೆಯ ಬಗ್ಗೆ ತಿಳಿಸಲು ಸಹಾಯವಾಣಿ ಸಂಖ್ಯೆ 112 ಗೆ ಡಯಲ್ ಮಾಡಿರುವುದಾಗಿ ಸಂತ್ರಸ್ತೆ ಹೇಳಿದ್ದಾರೆ.

ಸಮಸ್ತಿಪುರ್: ಇಬ್ಬರು ಸಹಚರರೊಂದಿಗೆ ಸೇರಿಕೊಂಡು ಆಸ್ಪತ್ರೆಯೊಳಗೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಖಾಸಗಿ ಅಂಗವನ್ನು ಮಹಿಳಾ ಉದ್ಯೋಗಿಯೊಬ್ಬರು ಬ್ಲೇಡ್ ನಿಂದ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಮುಸ್ರಿಘರಾರಿ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆ ನಂತರ ಗಾಯಗೊಂಡ ಡಾಕ್ಟರ್ ಹಾಗೂ ಅವರ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಆರೋಪಿ ಡಾಕ್ಟರ್ ಹಾಗೂ ಆತನ ಇಬ್ಬರು ಸಹಚರರು ಮದ್ಯದ ನಶೆಯಲ್ಲಿದ್ದರು. ಆತ್ಮ ರಕ್ಷಣೆಗಾಗಿ ಬ್ಲೇಡ್ ನಿಂದ ಡಾಕ್ಟರ್ ಖಾಸಗಿ ಅಂಗವನ್ನು ಗಾಯಗೊಳಿಸಿ ನಂತರ ಅಲ್ಲಿಂದ ಓಡಿ ಹೋಗಿದ್ದು, ತದನಂತರ ಆಸ್ಪತ್ರೆಯ ಹೊರಗಿನಿಂದ ಘಟನೆಯ ಬಗ್ಗೆ ತಿಳಿಸಲು ಸಹಾಯವಾಣಿ ಸಂಖ್ಯೆ 112 ಗೆ ಡಯಲ್ ಮಾಡಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಸಮಸ್ತಿಪುರ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸಂಜಯ್ ಕುಮಾರ್ ಪಾಂಡೆ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಪೊಲೀಸರ ತಂಡವೊಂದು ಕೂಡಲೇ ಸ್ಥಳಕ್ಕೆ ಧಾವಿಸಿ, ಸಂತ್ರಸ್ತೆಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆತಂದಿತು. ಬಳಿಕ ಪೊಲೀಸ್ ಅಧಿಕಾರಿಗಳ ತಂಡವೊಂದು ಆಸ್ಪತ್ರೆಗೆ ತೆರಳಿ ಡಾಕ್ಟರ್ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿತು ಎಂದು ಅವರು ಹೇಳಿದರು.

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮುನ್ನಾ ಡಾಕ್ಟರ್ ಹಾಗೂ ಆತನ ಸಹಚರರು ಸಿಸಿಟಿವಿ ಕ್ಯಾಮರಾ ಸ್ವಿಚ್ ಆಫ್ ಮಾಡಿದ್ದು, ಒಳಗಡೆಯಿಂದ ಆಸ್ಪತ್ರೆಯನ್ನು ಲಾಕ್ ಮಾಡಿದ್ದರು. ಮಹಿಳೆ ಅಲ್ಲಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಸಂತ್ರಸ್ತೆ ನೀಡಿದ ಆಧಾರದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳದಿಂದ ಬ್ಲೇಡ್ ಹಾಗೂ ಒಂದು ಬಾಟಲಿ ಲಿಕ್ಕರ್ ನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT